Thursday, December 12, 2024

Latest Posts

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

- Advertisement -

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿರುವುದನ್ನು ಖಂಡಿಸಿ, ಇಂದು ನಗರದ ಲಾಲ್ ಬಾಗ್ ಎದುರು ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ, ಇಡಿ ಅಸ್ತ್ರ ಇಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದು ಎಂದುಕೊಂಡಿದ್ದರೆ ಅದು ಅವರ ಭ್ರಮೆ. ನಾವೆಲ್ಲರೂ ನಮ್ಮ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜೊತೆ ಇದ್ದೇವೆ. ಬಿಜೆಪಿ ಸರ್ಕಾರದ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದರು.

ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಎಂ.ಬಿ ಪಾಟೀಲ್ ಹಾಗೂ ಶಾಂತಿನಗರ ಶಾಸಕರಾದ ಎನ್.ಎ ಹ್ಯಾರಿಸ್‌ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

 

 

- Advertisement -

Latest Posts

Don't Miss