Saturday, April 19, 2025

Latest Posts

ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -

Political News: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಅಂಥವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ಸಿಎಂ ಆರೋಪಿಸಿದ್ದಾರೆ.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಿಮ್ಸ್ ಆಸ್ಪತ್ರೆ ಎದುರು ಡಿಜೆ ಹಾಕಿ ಕುಣಿದ ವಿದ್ಯಾರ್ಥಿಗಳು: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್

ಬೆಳಗಾವಿಯಲ್ಲಿ ಮನೆ ಖರೀದಿಸಿದ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್..

ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದ ಪ್ರೀತಂಗೌಡ, ಆದರೆ..

- Advertisement -

Latest Posts

Don't Miss