Friday, December 6, 2024

Latest Posts

ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲುತ್ತೇವೆ: ಸಚಿವ ಸಂತೋಷ ಲಾಡ್ ವಿಶ್ವಾಸ

- Advertisement -

Hubli News: ಹುಬ್ಬಳ್ಳಿ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಅಲ್ಲದೇ ಗೆಲುವಿನ ಚಿತ್ರಣ ನಮಗೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ಜನರ ಆಶೀರ್ವಾದದ ಮೇಲೆ ವಿಶ್ವಾಸವಿದೆ. ನಮ್ಮ ಕಾಂಗ್ರೆಸ್ಸಿನ ಜನಪರ ಕಾಳಜಿಯನ್ನು ನೋಡಿ ಜನರು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವ ಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗೆಲ್ಲುವ ಚಿತ್ರಣ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

- Advertisement -

Latest Posts

Don't Miss