ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು ಜಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆಯ ಪರಿಣಾಮದಿಂದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಸೆಪ್ಟೆಂಬರ್ 8ರಂದು ಇನ್ನಷ್ಟು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗುವ ನಿರೀಕ್ಷೆ ಇದೆ. ನಿರಂತರ ಮಳೆಯಿಂದ ಜನ ಸುಸ್ತಾಗಿದ್ದು, ಅನೇಕ ಕಡೆ ಅಲರ್ಟ್ ಘೋಷಿಸಲಾಗಿದೆ. ಮಳೆ ಯಾವಾಗ ನಿಲ್ಲುತ್ತದೆ ಎಂಬುದರ ಬಗ್ಗೆ ಆತಂಕ ಹೆಚ್ಚಾಗಿದೆ.
ಮತ್ತೊಂದು ಕಡೆ ಮಳೆ ಅಬ್ಬರದಿಂದ ಹಲವೆಡೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ರೈತರು ತಮ್ಮ ಬೆಳೆ ನಷ್ಟ ಅನುಭವಿಸಿ ನರಳುತ್ತಿದ್ದಾರೆ. ಶೀಘ್ರವೇ ಬೆಳೆ ಹಾನಿ ಪರಿಹಾರ ನೀಡುವಂತೆ, ಸರ್ಕಾರಕ್ಕೆ ಅನ್ನದಾತರು ಆಗ್ರಹಿಸಿದ್ದಾರೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ