ದೆಹಲಿ : ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ(Weekend curfew)ವನ್ನು ತೆಗೆದುಹಾಕಲಾಗಿದೆ. ದೆಹಲಿ ಸರ್ಕಾರ(Government of Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್(lieutenant governor anil baijal) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ(DDMA) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಹೆಚ್ಚುತ್ತಿದ್ದ ಕಾರಣ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ದೆಹಲಿ ಸರ್ಕಾರ ಜಾರಿಗೆ ತಂದಿತ್ತು. ಈಗ ಅದನ್ನು ಸರಳೀಕರಿಸಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಎಂದಿನಂತೆ ಅಂಗಡಿ-ಮುಂಗಟ್ಟುಗಳು ಪ್ರತಿ ದಿನ ತೆರೆದಿರುತ್ತದೆ. ಚಿತ್ರಮಂದಿರಗಳು(Theaters), ರೆಸ್ಟೋರೆಂಟ್(Restaurant)ಗಳು, ಹಾಗೂ ಬಾರ್ ಗಳನ್ನು ಶೇಕಡ 50% ರಂತೆ ಕಾರ್ಯನಿರ್ವಹಿಸಬಹುದು. ಹಾಗೆಯೇ ಸರ್ಕಾರಿ ಕಚೇರಿಗಳಲ್ಲಿ ಶೇಕಡಾ 50ರಷ್ಟು ಸಿಬ್ಬಂದಿಯೊಂದಿಗೆ ತೆರೆಯಲು ಅನುಮತಿ ನೀಡಲಾಗಿದೆ. ಮದುವೆಗಳಲ್ಲಿ 200 ರಿಂದ 250 ಜನರು ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಶಾಲೆಗಳನ್ನು ಪುನಃ ತೆರೆಯುವ ನಿರ್ಧಾರವನ್ನು ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಇನ್ನು ಎಂದಿನಂತೆ ನೈಟ್ ಕರ್ಫ್ಯೂ(night curfew) ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.