Friday, July 4, 2025

Latest Posts

ನಿವೃತ್ತ ಯೋಧ ಮೆಹಬೂಬ್ ಸಾಬ್ ಗೆ ಅದ್ದೂರಿ ಸ್ವಾಗತ

- Advertisement -

ಧಾರವಾಡ : ಕಳೆದ ‍18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ನಂತರ ಸ್ವಗ್ರಾಮಕ್ಕೆ ಆಗಮಿಸಿದ ಯೋಧನಿಗೆ ತಾಲೂಕಿನ ಬಮ್ಮಿಗಟ್ಟಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು.

ಧಾರವಾಡ ಜಿಲ್ಲೆ ಕಲಘಟಗಿ‌ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಯೋಧ ಮೆಹಬೂಬಸಾಬ್ ಬೆಲವಂತರವರು ಆಗಸ್ಟ್‌ 1ರಂದು ಸೇವಾ ನಿವೃತ್ತಿಯಾಗಿದ್ದು,  ಕಳೆದ ದಿನ ಬುಧವಾರ ಸೈನಿಕ ಮೆಹಬೂಬಸಾಬ್ ಸ್ವಗ್ರಾಮಕ್ಕೆ ಆಗಮಿಸಿದರು. ಇನ್ನೂ ಯೋಧ ಗ್ರಾಮಕ್ಕೆ ಆಗಮಿಸುತ್ತಿರುವ ಮಾಹಿತಿ ತಿಳಿದ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿತ್ತು. ಗ್ರಾಮದ ಮಾಜಿ ಸೈನಿಕರು ಮೆಹಬೂಬಸಾಬ್ ಅವರಿಗೆ ಸೆಲ್ಯೂಟ್ ಹೊಡೆದು ಗೌರವ ಸೂಚಿಸಿದರು. ನಂತರ ಗ್ರಾಮಸ್ಥರ, ಮಾಜಿ‌ ಸೈನಿಕರು ಡೊಳ್ಳಿನ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮಾಡಿ ಆತ್ಮೀಯವಾಗಿ ಸ್ವಾಗತ ಮಾಡಿದರು.

ನಿವೃತ್ತ ಯೋಧ ಮೆಹಬೂಬ್ ಸಾಬ್ ಬೆಲವಂತರ ಮಾತನಾಡಿ, ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ ಎಂಬ ಹೆಮ್ಮೆ ನನಗಿದೆ 2004 ರಿಂದ ರಾಂಚಿ, ಜಮ್ಮು ಕಾಶ್ಮಿರ,ರಾಜಸ್ಥಾನ, ತಬಾಂಗ್ ಸೇರಿದಂತೆ ವಿವಿಧೆಡೆ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ ಎಂದರು. ನಿವೃತ್ತಿ ನಂತರ ಊರಿಗೆ ಆಗಮಿಸಿದಾಗ ದೇಶಭಕ್ತರು ಸ್ವಾಗತ ನೀಡಿದ್ದು ನಾನು ಸೇನೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಧನ್ಯತೆ ಭಾವ ಮೂಡಿಸಿದೆ ಎಂದರು.

ನಂತರ ಯೋಧನ ಮನೆಯ ಮುಂದೆ ಸ್ವಾಗತ ಕಾರ್ಯಕ್ರಮ ಆಯೋಜಿಸಿ ಮಾಜಿ ಸೈನಿಕರು,ಗ್ರಾಮ ಪಂಚಾಯತಿ ಸದಸ್ಯರು, ಸಂಘದ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳು, ದೇಶಾಭಿಮಾನಿಗಳು ಯೋಧ ಮೆಹಬೂಬಸಾಬ್ ಅವರನ್ನು ಸನ್ಮಾನಿಸಿದರು.

ಕರ್ನಾಟಕ ಟಿವಿ, ಧಾರವಾಡ

- Advertisement -

Latest Posts

Don't Miss