Bengal News: ಟಿಎಂಸಿ ನಾಯಕರಿಂದ ಹಿಂದೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ, ಟಿಎಂಸಿ ವಿರುದ್ಧ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾ ರ್ಯಾಲಿ ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಮ್ದಾರ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಕಾಂತ್ ತಲೆಯಿಂದ ರಕ್ತ ಸೋರುತ್ತಿರುವ ದೃಶ್ಯ ಕೂಡ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು, ಪೊಲೀಸರ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.
ಟಿಎಂಸಿ ನಾಾಯಕರು ಸ್ಥಳೀಯ ಹಿಂದೂಗಳ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿದ್ದಲ್ಲದೇ, ಹಿಂದೂ ಹೆಣ್ಣು ಮಕ್ಕಳನ್ನು ಕಚೇರಿಗೆ ಕೊಂಡೊಯ್ದು ರೇಪ್ ಮಾಡುತ್ತಿದ್ದಾರೆಂಬ ಆರೋಪ ಬಿಜೆಪಿ ಮಾಡಿತ್ತು. ಟಿಎಂಸಿ ನಾಯಕ ಶೇಖ್ ಶಹಜಾನ್ ಈ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿ, 20ಕ್ಕೂ ಹೆಚ್ಚು ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಪ್ರತಿಭಟನೆ ತಡೆಯಲು ಲಾಠಿ ಚಾರ್ಜ್ ನಡೆಸಿದ್ದು,