Thursday, February 6, 2025

Latest Posts

‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’

- Advertisement -

Political News: ಪಂಚರಾಜ್ಯ ಚುನಾವಣೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಮ ಮಂದಿರ ನಿರ್ಮಾಣದಿಂದ ಪಂಚರಾಜ್ಯ ಚುನಾವಣೆಯಲ್ಲಿ ಏನೂ ವ್ಯತ್ಯಾಸವಾಗುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೇರೆ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಕರ್ನಾಟಕವನ್ನು ಟೀಕೆ ಮಾಡುತ್ತಿದ್ದಾರೆ. ಅದಕ್ಕೆ ಅವರು ಮಧ್ಯ ಪ್ರದೇಶದಲ್ಲಿ ನನ್ನ ಹಾಗೂ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿಗಳಿಗೆ ವಿರೋಧ ಮಾಡಿದ್ದರು. ಈಗ ‘ವಿಕಸಿತ್ ಭಾರತ್’ ಎಂದು ವ್ಯಾನ್ ಕಳಿಸಿ ಅದರಲ್ಲಿ ಪ್ರಧಾನಮಂತ್ರಿಗಳ ಗ್ಯಾರಂಟಿ ಎಂದು ಬರೆದಿದ್ದಾರೆ. ಅದನ್ನು ಭಾರತದ ಸರ್ಕಾರ ಕಳುಹಿಸಿದೆ. ಮೊದಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ ಈಗ ಅವರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಇದನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?

ರಾಜ್ಯ ಸರ್ಕಾರಕ್ಕೆ ಬರಪರಿಹಾರ ನೀಡುವ ಸಂಬಂಧ ಕೇಂದ್ರವನ್ನು ಹಲವು ಬಾರಿ ಒತ್ತಾಯಿಸಿದ್ದೇವೆ. ಕೇಂದ್ರದಿಂದ 17,900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ನಮ್ಮ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್.ಡಿ.ಆರ್.ಎಫ್ ನಡಿ ಪರಿಹಾರವನ್ನು ನೀಡಬೇಕಿದ್ದು, ಅದನ್ನು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ. ಬರಪರಿಹಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss