- Advertisement -
Political News: ರಾಜ್ಯ ರಾಜಧಾನಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ 15 ನೇ ಹಣಕಾಸು ಅಡಿಯಲ್ಲಿ ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ. 15 ನೇ ಹಣಕಾಸು ಯೋಜನೆಯಲ್ಲಿ 14 ನೇ ಹಣಕಾಸು ಆಯೋಗಕ್ಕಿಂತ ಒಂದು ಲಕ್ಷ ಕೊಟಿ ಹೆಚ್ಚಿಗೆ ಕೊಟ್ಟಿದೆ. ಯುಪಿಎ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಐದು ವರ್ಷದಲ್ಲಿ ಒಟ್ಟು 7 ಸಾವಿರ ಕೋಟಿ ರೂ. ಬಂದಿತ್ತು. ಈಗ ಪ್ರತಿ ವರ್ಷ ಏಳು ಸಾವಿರ ಕೊಟಿ ಬರುತ್ತಿದೆ. 6 ಸಾವಿರ ಕಿ.ಮೀ. ಹೈವೆ ಆಗುತ್ತಿದೆ. ರಾಜ್ಯದಲ್ಲಿ ಕೇಂದ್ರದ ಅನುದಾನದಿಂದಲೇ ಯೋಜನೆಗಳು ನಡೆಯುತ್ತಿವೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ನವೆಂಬರ್ ನಲ್ಲಿ ಏನಾಗುತ್ತೊ ಬಿಡುತ್ತದೊ ಅದು ಕಾಂಗ್ರೆಸ್ ಆಂತರಿಕ ವಿಚಾರ. ಆದರೆ, ಒಂದು ವಿಚಾರ ಸ್ಪಷ್ಟ ಆಡಳಿತ ಮಾಡುವುದನ್ನು ಬಿಟ್ಟು ಸಿಎಂ ನಾನು ಮುಂದುವರೆಯುತ್ತೇನೆ ಎನ್ನುವುದು ಕೆಲವರು ಅವರು ಮುಂದುವರೆಯುವುದಿಲ್ಲ ಎನ್ನುವುದು. ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳ ನಡುವೆ ಸಾಕಷ್ಡು ಗೊಂದಲ ಇದೆ. ಅಶಿಸ್ತು ತೋರಿದರೆ ಕ್ರಮ ಕೈಗೊಳ್ಳುತ್ತೆನೆ ಎಂದರೂ ಶಾಸಕರು ಸುಮ್ಮನಿಲ್ಲ. ಹೈಕಮಾಂಡ್ ನವರಿಗೂ ಇದರ ಸ್ಪಷ್ಟತೆ ಇಲ್ಲಾ. ಸಿಎಂ ಸಿದ್ದರಾಮಯ್ಯ ಅವರ ಹಿನ್ನೆಲೆ ಮತ್ತು ಇಮೇಜ್ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಡಿಸಿಎಂ ಶಿವಕುಮಾರ್ ಪಕ್ಷ ಕಟ್ಟಿದ್ದಾರೆ ಅವರ ಬಗ್ಗೆಯೂ ಯೋಚನೆ ಮಾಡಿ ಯಾವುದೇ ನಿರ್ಧಾರಕ್ಕೆ ಬರಲು ಆಗುತ್ತಿಲ್ಲ. ಕ್ರಾಂತಿ ನವೆಂಬರ್ ನಲ್ಲಿ ಆಗುತ್ತದೊ ಡಿಸೆಂಬರ್ ನಲ್ಲಿ ಆಗುತ್ತದೊ ಕಾದುನೋಡಬೇಕು ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ಮಾಜಿ ಸಿಎಂ ತಿರುಗೇಟು ನೀಡಿದ್ದಾರೆ.
ಬಿಗ್ ಬಾಸ್ ವಿಚಾರ ಆ ಸ್ಟುಡಿಯೊ ಮಾಲಕರು ಮತ್ತು ಅಧಿಕಾರಿಗಳ ನಡುವೆ ನಡೆಯುವುದು ಯಾವ ಕಾನೂನಿನ ಅಡಿಯಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದಕ್ಕೂ ಕಾನೂನು ಪ್ರಕಾರ ನಡೆಯುವ ಪದ್ದತಿ ಇದೆ. ಈ ಮಧ್ಯೆ ಅದಕ್ಕೆ ಡಿಸಿಎಂ ಅವರು ಹಿಂದೆ ಆಡಿದ ಮಾತು ಸೇರಿಸಿ ಕೆಲವರು ಹೇಳುತ್ತಿದ್ದಾರೆ. ಅದು ಮುಖ್ಯವಲ್ಲ. ಎಲ್ಲೊ ದಾರಿ ತಪ್ಪುತ್ತಿದೆ ಎನಿಸುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ವ್ಯಾಪ್ತಿ ಏನು ಬಂದ್ ಮಾಡುವ ಅಧಿಕಾರ ಇದೆಯಾ ಇಲ್ಲವಾ ನೋಡಬೇಕು. ಒಂದು ಕಡೆ ಮನರಂಜನಾ ಉದ್ಯಮ ನಡೆಯಬೇಕು ಇನ್ನೊಂದೆಡೆ ಮಾಲಿನ್ಯವಾಗದಂತೆ ನೊಡಿಕೊಳ್ಳಬೇಕಿದೆ.
ಎಷ್ಟು ದಿನದಿಂದ ಈ ಸಮಸ್ಯೆ ಇದೆ. ಈಗ್ಯಾಕೆ ಈ ಕ್ರಮ ಕೈಗೊಂಡಿದ್ದಾರೆ ಎನ್ನುವ ಪ್ರಶ್ನೆ ಮೂಡುತ್ತದೆ. ಇಕೊ ಎಕನಾಮಿಕ್ಸ್ ಅಂತಾರೆ, ಆರ್ಥಿಕತೆಯೂ ನಡೆಯಬೇಕು, ಪರಿಸರವೂ ಉಳಿಯಬೇಕು. ಅದು ಈ ರಾಜ್ಯದಲ್ಲಿ ತಪ್ಪಿ ಹೋಗಿದೆ. ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ. ನಡೆದದ್ದೇ ದಾರಿ ಎನ್ನುವಂತಾಗಿದೆ. ಹಾಗೆ ಆದಾಗಲೇ ಈ ರೀತಿಯ ಘಟನೆಗಳು ನಡೆಯುತ್ತವೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅನುಮತಿ ಕೊಡೆಸಿ ಇದರಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನ ಮಾಡಿದ್ದಾರೆ .
https://twitter.com/BSBommai/status/1976192697288491101
- Advertisement -