ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆ, ಮಾಜಿ ಸಂಸದ ಡಿ.ಕೆ. ಸುರೇಶ್ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದೆ.
ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಖರ್ಗೆ ಭೇಟಿ ಬಳಿಕ ಡಿಕೆಶಿ ನಾನು ಸಾಮಾನ್ಯ ಕಾರ್ಯಕರ್ತ ಎಂದು ಹೇಳಿಕೆ ಕೊಟ್ಟಿದ್ರು.
ಡಿ.ಕೆ. ಶಿವಕುಮಾರ್ ವೈರಾಗ್ಯದ ಮಾತುಗಳನ್ನು ಕೇಳಿ, ಡಿಕೆ ಸುರೇಶ್ ಸಹೋದರನಿಗೆ ಸಲಹೆ ಕೊಟ್ಟಿದ್ದಾರೆ. ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು ಅಂತಾ ಪೋಸ್ಟ್ ಮಾಡಿದ್ದಾರೆ. ಯಾವ ಅರ್ಥದಲ್ಲಿ ಈ ಪೋಸ್ಟ್ ಮಾಡಿದ್ದಾರೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.




