ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಾಯಕರ ಬೆಂಬಲ ಇದೆ. ಹೀಗಾಗಿ ಸಿಎಂ ಆಗಿ ಇರುತ್ತಾರೆ. ಹೀಗಂತ ಸಿದ್ದು ಪರ, ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಸಾಧ್ಯ ಅಂತಾ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ ಅವರ, ಆಶೀರ್ವಾದ ಇದೆ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮಾಡಿ, ಸಿದ್ದರಾಮಯ್ಯರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. 1 ವರ್ಷಕ್ಕೆ ಮಾತ್ರವಲ್ಲ.. 5 ವರ್ಷಕ್ಕೂ ಆಯ್ಕೆ ಮಾಡಲಾಗಿದೆ. ಸಿಎಂ ಬದಲಾವಣೆ ಮಾಡುವ ಅಧಿಕಾರ, ಕೇವಲ ಹೈಕಮಾಂಡಿಗೆ ಇದೆ. ಆದರೆ ಅಂಥಾ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿಲ್ಲ. ಎಲ್ಲರೂ ಒಂದಾಗಿ ಕೆಲಸ ಮಾಡಿದ್ದೇವೆ ಅಂತಾ, ದೇಶಪಾಂಡೆ ಹೇಳಿದ್ರು.
ಇದೇ ವೇಳೆ ರಾಜ್ಯದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದು, ವಿರೋಧ ಪಕ್ಷವಾಗಿ ಆರೋಪ ಮಾಡುವುದು ಬಿಜೆಪಿಯವರ ಕರ್ತವ್ಯ. ಅವರು ಅದನ್ನೇ ಮಾಡ್ತಿದ್ದಾರೆ. ಸರ್ಕಾರ ಎಲ್ಲಾ ಪ್ರಯತ್ನ ಮಾಡಿ, ರಸಗೊಬ್ಬರ ಕೊಡುವ ಪ್ರಯತ್ನ ಮಾಡ್ತಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡ್ತೀವಿ. ರಾಜ್ಯದ ಪಾಲಿನ ಯೂರಿಯಾವನ್ನ ಕೊಡಲಿ. ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರನ್ನು, ಹ್ಯಾಂಗ್ ಮಾಡಬೇಕು ಅಂತಾ, ಆರ್.ವಿ. ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ರು.