‘ಇಂಥ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ?’

Political News: ಸಾಮಾಜಿಕ ಜಾಲತಾಣದಲ್ಲಿ ಕಾಲಿಲ್ಲದ ವೃದ್ಧೆಯೋರ್ವಳು, ರಸ್ತೆಯಲ್ಲಿ ತೆವಳಿಕೊಂಡು, ಆಕೆಗೆ ಬರುವ ವೇತನದ ಬಗ್ಗೆ ವಿಚಾರಿಸಲು, ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದಾರೆ ಎಂಬ ವೀಡಿಯೋ ಹರಿದಾಡುತ್ತಿದೆ. ಹಲವು ಬಿಜೆಪಿ ನಾಯಕರು ಈ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಅದೇ ರೀತಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ, ತಮ್ಮ ಎಕ್ಸ್ ಖಾತೆಯಲ್ಲಿ, ವೀಡಿಯೋ ಅಪ್ಲೋಡ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ.

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ  ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ?

 ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ

ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

ವಂದೇ ಭಾರತ್ ರೈಲಿನಲ್ಲಿ ಹಳಸಿದ ಆಹಾರ ನೀಡಿದ್ದಾಗಿ ಪ್ರಯಾಣಿಕರ ಆರೋಪ..

About The Author