Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ.
ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಲಿದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಶಿಗ್ಗಾಂವಿ ಟಿಕೆಟ್ ನಲ್ಲಿಯೂ ಗೊಂದಲ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಲಾಡ್, ನಮ್ಮ ನಮ್ಮ ಅಭಿಪ್ರಾಯ ಈಗಾಗಲೇ ಹೇಳಿದ್ದೇವೆ. ಕೊನೆಯದಾಗಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದೇ ಫೈನಲ್ ಎಂದಿದ್ದಾರೆ.
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಕರೆತರುವ ವಿಚಾರದ ಬಗ್ಗೆ ಮಾತನಾಡಿದ ಲಾಡ್, ನನಗೆ ಆ ಭಾಗದಲ್ಲಿ ಜಾಸ್ತಿ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರೇ ಅಲ್ಲಿ ಜವಾಬ್ದಾರಿ ಇದೆ ಸಿಎಂ ಗೂ ಜವಾಬ್ದಾರಿ ಅಲ್ಲಿದೆ.
ಹೈಕಮಾಂಡ್ ಜೊತೆ ಮಾತನಾಡಿ, ಅವರೇ ಫೈನಲ್ ಮಾಡ್ತಾರೆ. ಅದರ ಬಗ್ಗೆ ನನಗೆ ಜಾಸ್ತಿ ಮಾಹಿತಿ ಇಲ್ಲ. ಈ ಬಾರಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ. ಚನ್ನಪಟ್ಟಣದಲ್ಲಿ ಪಾರ್ಲಿಮೆಂಟ್ ಅಲ್ಲಿ ಲೀಡ್ ಆಗಿದ್ದೇವೆ. ಶಿಗ್ಗಾಂವಿ ಸಹ ಲೀಡ್ ಆಗಿದ್ದೇವೆ. ಸಂಡೂರು ಸಹ ಎರಡು ಬಾರಿ ಲೀಡ್ ಆಗಿದ್ದೇವೆ. ಹೀಗಾಗಿ ನಗೆ ನಂಬಿಕೆ ಇದೆ. ಮೂರಕ್ಕೆ ಮೂರು ನಾವು ಗೆಲ್ಲುತ್ತೇವೆ ಎಂದು ಸಂತೋಷ್ ಲಾಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.