Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂದ್ರೆ ಈಗಲೇ ಆಗಬೇಕು. ಇಲ್ಲದಿದ್ದಲ್ಲಿ ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ. ಯಾಕಂದ್ರೆ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದೇವೆ. ಎನ್‌ಡಿಎ ಭಾಗವಾಗಿ ಜೆಡಿಎಸ್ ನಮ್ಮ ಜೊತೆಗಿದೆ. ಅಲ್ಲದೇ ಕಾಂಗ್ರೆಸ್ ಕುಸಿತ ಕಾಣುತ್ತಿದೆ. ಹಾಗಾಗಿ ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ ಇನ್ನು ಭವಿಷ್ಯದಲ್ಲಿ ಡಿಕೆಶಿ ಸಿಎಂ ಆಗಲು ಸಾಧ್ಯವೆ ಇಲ್ಲ. ನೌ ಆರ್ ನೆವರ್. ಸಿಎಂ ಆಗುವುದಿದ್ದರೆ, ಈಗಲೇ ಆಗಬೇಕು. ಇಲ್ಲದಿದ್ದಲ್ಲಿ, ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.
ಇನ್ನು ಗ್ಯಾರೆಂಟಿ ಮೂಲಕ ನಾವು ಜನರ ಮನಸ್ಸನ್ನು ಗೆಲ್ಲುತ್ತೇವೆ. ಬಿಜೆಪಿಯನ್ನು ಜನ ರಾಜ್ಯದಿಂದ ಕಿತ್ತೆಸೆಯಲಿದ್ದಾರೆ ಎಂಬ ಕಾಂಗ್ರೆಸ್ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಸಿ.ಟಿ.ರವಿ, ಅವರು ಯಾರಪ್ಪನ ಮನೆಯಿಂದ ಗ್ಯಾರಂಟಿಗಾಗಿ ದುಡ್ಡು ಬಳಸುತ್ತಿದ್ದಾರೆ. ಜನರ ತೆರಿಗೆ ಹಣವನ್ನು ಬಳಸುತ್ತಿದ್ದಾರೆ. ಎಲ್ಲದರ ಬೆಲೆ ಏರರಿಕೆ ಮಾಡಿದ್ದಾರೆ. ಪೆಟ್ರೋಲ್- ಡಿಸೆಲ್ ಬೆಲೆ ಏರಿಸಿದ್ದಾರೆ. ರಾಶಿ ರಾಶಿ ಸಾಲ ಮಾಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬರೋದಿಲ್ಲಾ ಎಂದು ಸಿ.ಟಿ.ರವಿ ಹೇಳಿದ್ದಾರೆ.
ನವಲಗುಂದ ಕ್ಷೇತ್ರವನ್ನ ಸಿಎಂ ಸಿದ್ದರಾಮಯ್ಯಗೆ ದತ್ತು ನೀಡ್ತೇವೆ- ಶಾಸಕ ಕೋನರೆಡ್ಡಿ
ಯಾವ ನೈತಿಕತೆಯಿಂದ ಇನ್ನೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತಿದ್ದೀರಿ?: ಪ್ರೀತಂಗೌಡ