www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮಕ್ಕಳ ಭವಿಷ್ಯದ ಕುರಿತಾಗಿ 2021-22 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿ ಮೂರು ಮಾದರಿಯ ಪರೀಕ್ಷೆ ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
2020-21 ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಎಸ್ ಎಸ್ ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ಆಧಾರವಾಗಿ ಇಟ್ಟುಕೊಂಡು ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ತೀರ್ಮಾನ ತೆಗೆದುಕೊಂಡಿತ್ತು. ಹಾಗೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮೌಲ್ಯ ಮಾಪನೆ ಮಾಡಿ ಫಲಿತಾಂಶ ಪ್ರಕಟಿಸಲು ಯಾವುದೇ ಮಾನದಂಡವನ್ನೂ ಅನುಸರಿಸಿರಲಿಲ್ಲ.
ಆದಕಾರಣ 6 ವಿಷಯಗಳಿಗೆ ಎರಡು ದಿನ ಮಾತ್ರ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಯಲ್ಲಿ ಪಾಸ್ ಮಾಡುವ ಉದ್ಧೇಶದಿಂದ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮಾದರಿ ಪರೀಕ್ಷೆಯನ್ನು ನಡೆಸುವಲ್ಲಿ ಮಾಜಿ ಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ಯಶಸ್ವಿಯಾಗಿದ್ದರು. ಆದರೆ ಈಗ 2021-22 ನೇ ಸಾಲಿನ ಶೈಕ್ಷಣಿಕ ಸಾಲಿನ ಬಗ್ಗೆ ಚಿಂತೆಯಾಗಿದೆ.
ಡಿಸೆಂಬರ್ ತಿಂಗಳೊಳಗೆ ಎಸ್ ಎಸ್ ಎಲ್ ಪರೀಕ್ಷೆ ಯಾವ ರೀತಿಯಲ್ಲಿ ನಡೆಸಬೇಕು ಎನ್ನುವರದ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ಟಿವಿ- ಬೆಂಗಳೂರು