ರಾಜ್ಯದ ರಾಜಧಾನಿ ಬೆಂಗಳೂರಿನ ಭಾಗವೇ ಆಗಿ ಕಾಣೋ ತುಮಕೂರು ಜಿಲ್ಲೆಗೂ ನಮ್ಮ ಮೆಟ್ರೋ ಸಾಗಲಿದೆ ಅನ್ನೋ ವಿಷಯ ಕೇಳಿಯೇ ತುಮಕೂರಿನ ಮಂದಿ ಖುಷಿಪಟ್ಟಿದ್ದಾರೆ. ಸದ್ಯ, ಕರ್ನಾಟಕ ಸರ್ಕಾರವು ಬೆಂಗಳೂರು – ತುಮಕೂರು ಮೆಟ್ರೋ ವಿಸ್ತರಣೆ ಯೋಜನೆಗೆ ಸಂಬಂಧಿಸಿದಂತೆ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಅನುಮೋದನೆ ನೀಡಿದೆ. ಸದ್ಯ ಯೋಜನೆಯ 2ನೇ ಹಂತವಾದ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧ ಪಡೆಸಲಾಗುತ್ತಿದೆ. ಡಿಪಿಆರ್ ತಯಾರಿಕಾ ವೆಚ್ಚದ ಕುರಿತು ಸರ್ಕಾರ ಸೆಪ್ಟೆಂಬರ್ ಅಂತ್ಯದಲ್ಲಿ ಆದೇಶ ಹೊರಡಿಸಿದೆ.
ಮದಾವರದಿಂದ ತುಮಕೂರಿಗೆ 59.6 ಕಿ.ಮೀ. ಮೆಟ್ರೋ ಮಾರ್ಗ ವಿಸ್ತರಿಸುವ ಗುರಿ ಇದೆ. ಸದ್ಯ ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಇದು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ನಡೆಯಲಿದೆ. ಈ ಯೋಜನೆಯ ಮೊದಲ ಹಂತಕ್ಕೆ 20,649 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ ಇದೆ. ಇದು ಬೆಂಗಳೂರು ಮತ್ತು ತುಮಕೂರು ನಡುವೆ ಉತ್ತಮ ಸಂಪರ್ಕ ಕಲ್ಪಿಸಲಿದೆ.
ಮಾದಾವರ, ಮಾಕಳಿ, ದಾಸನಪುರ, ನೆಲಮಂಗಲ, ವೀವರ್ ಕಾಲೋನಿ, ನೆಲಮಂಗಲ ವಿಶ್ವೇಶ್ವರಪುರ, ನೆಲಮಂಗಲ ಟೋಲ್‌ಗೇಟ್, ಬೂದಿಹಾಳ್, ಟಿ. ಬೇಗೂರು, ತಿಪ್ಪಗೊಂಡನಹಳ್ಳಿ, ಕುಲವನಹಳ್ಳಿ, ಮಹಿಮಾಪುರ, ಬಿಲ್ಲನ್‌ಕೋಟೆ, ಸೋಂಪುರ ಕೈಗಾರಿಕಾ ಪ್ರದೇಶ, ದಾಬಸ್‌ಪೇಟೆ, ನಲ್ಲಾಯನಪಾಳ್ಯ, ಚಿಕ್ಕಹಳ್ಳಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಪಂಡಿತನಹಳ್ಳಿ, ಕ್ಯಾತ್ಸಂದ್ರ ಬೈಪಾಸ್, ಕ್ಯಾತ್ಸಂದ್ರ, ಎಸ್‌ಐಟಿ (ಸಿದ್ಧಾರ್ಥ ಕಾಲೇಜು), ತುಮಕೂರು ಬಸ್ ನಿಲ್ದಾಣ, ಟೂಡಾ ಲೇಔಟ್, ನಾಗಣ್ಣ ಪಾಳ್ಯ, ಶಿರಾ ಗೇಟ್‌ನ ಇವು ಬೆಂಗಳೂರು ತುಮಕೂರು ನಮ್ಮ ಮೆಟ್ರೋ ಮಾರ್ಗದಲ್ಲಿ ಒಟ್ಟು 26 ಸಂಭಾವ್ಯ ನಿಲ್ದಾಣಗಳನ್ನು ಗುರುತಿಸಲಾಗಿದೆ. ಎಲ್ಲವೂ ಎಲೆವೆಟೆಡ್ ಮಾದರಿಯ ನಿಲ್ದಾಣಗಳಾಗಿವೆ. ಹೀಗಾಗಿ, ನಿರ್ಮಾಣ ವೆಚ್ಚ ಹಾಗೂ ಸಮಯ ಎರಡು ಕಡಿಮೆ ಇರಲಿದೆ.
ವರದಿ : ಲಾವಣ್ಯ ಅನಿಗೋಳ