Tuesday, October 7, 2025

Latest Posts

‘ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ?’

- Advertisement -

Political News: ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಹತ್ಯೆಗೀಡಾಗಿದ್ದಾನೆ. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ. ಈ ವಿಷಯದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ಹೊರಹಾಕಿ ಟ್ವೀಟ್ ಮಾಡಿದ್ದಾರೆ.

ಅನ್ನಭಾಗ್ಯ, ಗೃಹಲಕ್ಷ್ಮೀ ಹೆಸರಿನಲ್ಲಿ ಲೋಕೋದ್ಧಾರ ಮಾಡಿದ್ದೇವೆ ಎಂದು ಸುಳ್ಳುಲೆಕ್ಕ ಕೊಟ್ಟು ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ನಿಮ್ಮ ಲೊಳಲೊಟ್ಟೆ ಬಯಲಾಗಿದೆ ಸಿದ್ದರಾಮಯ್ಯನವರೇ,  ನುಡಿದಂತೆ ನಡೆದಿದ್ದೇವೆ ಎಂದರೆ ಇದೇನಾ ಮುಖ್ಯಮಂತ್ರಿಗಳೇ?

ಗ್ಯಾರಂಟಿಗಳ ಮೂಲಕವೇ ಗತಿಗೆಟ್ಟ ಕಾಂಗ್ರೆಸ್ ಪಕ್ಷದ ಹೊಟ್ಟೆ ಹೊರೆಯುತ್ತಿರುವ ಮತಿಗೆಟ್ಟ ನಿಮ್ಮ ಸರಕಾರವು ಕಲ್ಯಾಣ ಕಾರ್ಯಕ್ರಮಗಳ ಕಪಟ ಪೋಷಾಕಿನಿಂದ ಮೆರೆಯುತ್ತಿದೆ. ಆ ಪೋಷಾಕು, ನಿಮ್ಮ ಢೋಂಗಿಧೀರತ್ವದ ಮುಖವಾಡ ಕಳಚಿ ನೆಲಕ್ಕೆ ಬಿದ್ದಿದೆ. ಇನ್ನಾದರೂ ಎಚ್ಚೆತ್ತುಕೊಳ್ಳಿ.

ಅಧಿಕಾರದ ಮದವೇರಿ ಮಂಪರು ಬಿದ್ದಿರುವ ನಿಮ್ಮ ಕಂಗಳು ಆ ನತದೃಷ್ಟನ ಪ್ರಾಣಾರ್ಪಣೆಯಿಂದಲಾದರೂ ತೆರೆದುಕೊಳ್ಳಲಿ. ಇಲ್ಲವಾದರೆ, ಆ ಯುವಕನ ಸಾವಿನ ಶಾಪ ನಿಮಗೆ ತಟ್ಟದೇ ಬಿಡದು. ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ? ಇದ್ದರೆ ಈ ಧಾರುಣಕ್ಕೆ ರಾಜ್ಯ ಸಾಕ್ಷಿಯಾಗುತ್ತಿತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು.

ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ.

ಈ ತಾಯಿಯ ಕುಟುಂಬಕ್ಕೆ ಅನ್ನಭಾಗ್ಯ ಏಕೆ ತಲುಪಿಲ್ಲ? ಗೃಹಲಕ್ಷ್ಮೀ ಅವರ ಮನೆ ಬಾಗಿಲಿಗೆ ಹೋಗಿಲ್ಲವೇಕೆ? ಇದಕ್ಕೆ ನೀವೇ ಹೊಣೆ ಸಿದ್ದರಾಮಯ್ಯನವರೇ. 15ನೇ ಬಜೆಟ್ ಮಂಡಿಸುವ ಉಮೇದಿನಲ್ಲಿರುವ ನೀವು ಈ ‘ಸತ್ತ ಸರಕಾರದ ಸಾಹುಕಾರ’ನಷ್ಟೇ. ನಿಮ್ಮ ಸೋಗಲಾಡಿ ಸಮಾಜವಾದ ಬೆತ್ತಲಾಗಿದೆ. ಅನ್ನಕ್ಕಾಗಿ ಸಂಭವಿಸಿದ ಈ ಆತ್ಮಹತ್ಯೆ ಇಡೀ ನಾಡಿಗೇ ಕಪ್ಪುಚುಕ್ಕೆ.

ಇನ್ನೊಂದು ಸಲಹೆ; ಹಳ್ಳ ಹಿಡಿದಿರುವ ನಿಮ್ಮ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ. ಅವುಗಳ ವೈಫಲ್ಯವನ್ನು ಪರಾಮರ್ಶೆ ಮಾಡಿ. ಅಧಿಕಾರಿಗಳ ಕಿವಿ ಹಿಂಡಿ ಕೆಲಸ ಮಾಡಿಸಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದ್ದರೆ ಮೊದಲು ಈ ಕೆಲಸ ಮಾಡಿ. ಅನ್ನಕ್ಕಾಗಿ ಜೀವತೆತ್ತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ತಾಯಿಯ ಆರೋಗ್ಯ ಸುಧಾರಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸ್ವಂತ ತಂಗಿಯ ಬಗ್ಗೆಯೇ ಅಸೂಯೆ: ಮದುವೆಗಿಟ್ಟಿದ್ದ ಆಭರಣ ಕದ್ದ ಅಕ್ಕ

ಪದೇ ಪದೇ ಒಂದೇ ಪ್ರಾಡಕ್ಟ್ ಲಾಂಚ್ ಮಾಡಿದ್ದಕ್ಕೆ ಕಾಂಗ್ರೆಸ್ ಸೋತಿದೆ: ರಾಹುಲ್ ಬಗ್ಗೆ ಮೋದಿ ವ್ಯಂಗ್ಯ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಅಂಜುಮನ್ ಚುನಾವಣೆ ವಿರೋಧಿಸಿ ಕುಟುಂಬಸ್ಥರ ಆಕ್ರೋಶ..!

- Advertisement -

Latest Posts

Don't Miss