Monday, October 27, 2025

Latest Posts

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

- Advertisement -

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ ಗಡಿಗೆ ಹತ್ತಿರ ಇರುವ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಹಗುರ ಅಥವಾ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ತಜ್ಞರ ಪ್ರಕಾರ, ಅಕ್ಟೊಬರ್ 28-29ರವರೆಗೆ ಚಂಡಮಾರುತದ ಎಫೆಕ್ಟ್ ಮುಂದುವರಿಯಬಹುದು. ಚಂಡಮಾರುತದ ವೇಗ ಕುಗ್ಗಿದರೆ, ಬೆಂಗಳೂರು ಮತ್ತು ದಕ್ಷಿಣ ಒಳನಾಡು, ಮಲೆನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆ ಸಾಧ್ಯತೆ ಕಡಿಮೆ ಇದೆ.

ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧಗೊಳಿಸಲಾಗಿದೆ.ಈ ಚಂಡಮಾರುತವು ಕರಾವಳಿಯತ್ತ ಸಾಗುತ್ತಿದ್ದು, ವಿಶಾಖಪಟ್ಟಣಂ, ಚೆನ್ನೈ, ಕಾಕಿನಾಡ, ಗೋಪಾಲಪುರ ಮುಂತಾದ ಪ್ರದೇಶಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ. ಪರಿಸ್ಥಿತಿಯನ್ನು ಎದುರಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧಗೊಳಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss