Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಯಾರು? ದರ್ಶನ್ ಸಿಲುಕಿಕೊಂಡಿದ್ದು ಹೇಗೆ? ಪವಿತ್ರಾಗೌಡ ಹೆಸರು ಈ ಕೇಸ್ನಲ್ಲಿ ತಳಕು ಹಾಕಿಕೊಂಡಿದ್ದೇಕೆ ಎಂಬ ಇಂಟ್ರೆಸ್ಟಿಂಗ್ ಸ್ಟೋರಿ ತೋರಿಸ್ತೀವಿ ನೋಡಿ..
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಪದೇ ಪದೇ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾಗೌಡ ಕುರಿತು ಅಶ್ಲೀಲ ಫೋಟೋಗಳು ಹಾಗೂ ಬಹಳ ಕೆಟ್ಟ ರೀತಿಯ ಸಂದೇಶಗಳನ್ನು ಹಂಚಿಕೊಂಡಿದ್ದ. ಕಳೆದ ಭಾನುವಾರ ಬೆಂಗಳೂರಿನ ಕಾಮಾಕ್ಷಿಪಾಳ್ಯಕ್ಕೆ ರೇಣುಕಾಸ್ವಾಮಿ ಕರೆಸಿಕೊಂಡಿದ್ದ ದರ್ಶನ್ ಹಾಗೂ ಆಪ್ತರು, ಶೇಡ್ವೊಂದರಲ್ಲಿ ಕೊಲೆ ಮಾಡಿದ್ದರು.
ಈ ವೇಳೆ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು. ಅಲ್ಲದೇ, ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ದರ್ಶನ್ ಒದ್ದಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಮೃತಪಟ್ಟಿದ್ದ. ನಂತರ ರೇಣುಕಾಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯದ ಮೋರಿಯಲ್ಲಿ ಎಸೆಯಲಾಗಿತ್ತು. ಶವವನ್ನು ನಾಯಿಗಳು ಎಳೆದು ರಸ್ತೆಗೆ ತಂದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ರೇಣುಕಾಸ್ವಾಮಿ ಅವರು ಚಿತ್ರದುರ್ಗದಲ್ಲಿ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದರು.
ನಿನ್ನೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ದರ್ಶನ್ ಅವರ ಇಬ್ಬರು ಆಪ್ತರನ್ನು ಬಂಧಿಸಿದ್ದರು. ಪೊಲೀಸರು ತಮ್ಮ ಭಾಷೆಯಲ್ಲಿ ತನಿಖೆ ನಡೆಸಿದಾಗ ದರ್ಶನ್ ಹತ್ಯೆಗೆ ಸುಪಾರಿ ನೀಡಿದ್ದರು. ದರ್ಶನ್ ಕೂಡ ರೇಣುಕಾಸ್ವಾಮಿ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಆಪ್ತರು ತಪ್ಪನ್ನು ಒಪ್ಪಿಕೊಂಡಿದ್ದರು.
ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಮೈಸೂರಿಗೆ ತೆರಳಿದ್ದ ಆರ್.ಆರ್.ನಗರ ಪೊಲೀಸರು, ಇಂದು ಬೆಳಗ್ಗೆ ತೋಟದ ಮನೆಯಲ್ಲಿದ್ದ ದರ್ಶನ್ ಅವರನ್ನು ಬಂಧಿಸಲಾಗಿದೆ. ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತರಲಾಗಿದೆ.
ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆತಂದು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಂತರ ಅವರನ್ನು ನ್ಯಾಯಾಧೀಶರ ಮುಂದೆ ಪ್ರಡ್ಯೂಸ್ ಮಾಡಿ, ನಂತರ ವಶಕ್ಕೆ ಪಡೆಯಲಾಗುತ್ತದೆ. ಇನ್ನೂ, ದರ್ಶನ್ ಬಂಧನವಾಗಿರುವುದು ಅಭಿಮಾನಿಗಳಿಗೆ ದೊಡ್ಡ ಆಘಾತ ತಂದಿದೆ.
ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?