ಯಾರು ಹೊಸ ಮುಖ್ಯಮಂತ್ರಿ ?

www.karnatakatv.net : ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಕಸರತ್ತು ಮುಂದುವರೆದಿದೆ. ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಯಾರು? ಎಂಬ ಕುತೂಹಲ ಮೂಡಿದೆ.

ಇಂದು ಮಧ್ಯಾಹ್ನ  ಬೆಂಗಳೂರಿಗೆ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದಾರೆ. ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆಗಮಿಸುತ್ತಾರೆ ಎಂಬ ಸುದ್ದಿಗಳು ಹಬ್ಬಿವೆ.

ಹೊಸ ಮುಖ್ಯಮಂತ್ರಿ ಆಯ್ಕೆಗೆ ಶಾಸಕರ ಜೊತೆ ಸಭೆ ನಡೆಸಲು ಕೇಂದ್ರಿಂದ ವೀಕ್ಷಕರಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆಗಮಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ  ಎಂಬ ಸುದ್ದಿ ಇತ್ತು. ಆದರೆ ಅವರು ತಝಕಿಸ್ತಾನ್ ಪ್ರವಾಸಕ್ಕೆ ತೆರಳಲಿದ್ದಾರೆ.

ಶಾಸಕರಿಗೆ ಸಂದೇಶ ಬಿಜೆಪಿಯ ಎಲ್ಲಾ ಶಾಸಕರಿಗೆ ಬೆಂಗಳೂರಿಗೆ ಬರುವಂತೆ ಸಂದೇಶ ರವಾನೆ ಮಾಡಲಾಗಿದೆ. ಬುಧವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಯುವ ನಿರೀಕ್ಷೆ ಇದ್ದು, ಸಭೆಯಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಣೆ ನಡೆಯಲಿದೆ.

About The Author