Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಪರ ಇಂದು, ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಡ್ರಾಮಾ ಕೂಡ ನಡೆದಿದೆ. ಈ ಬ್ಗಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸಂತೋಷದ ವಿಷಯ. ಆದರೆ ಈ ಪ್ರತಿಭಟನೆ ಯಾವ ಪುರುಷಾರ್ಥಕ್ಕಾಗಿ? ಸಮಾಜದ ಶಾಂತಿ ಭಂಗ ಉಂಟುಮಾಡುವವರ ವಿರುದ್ಧ ನಮ್ಮ ಸರ್ಕಾರ ತೀಕ್ಷ್ಣ ಕ್ರಮ ಕೈಗೊಳ್ಳಲಿದೆ. ಆದರೆ ಇಂತಹ ಘಟನೆಗಳು ನಡೆದಾಗ ಇವರಲ್ಲಿ ಹುಟ್ಟುವ ಈ ಆಕ್ರೋಶ, ಪ್ರತಿಭಟನೆ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾದಾಗ ಎಲ್ಲಿಹೋಗಿತ್ತು? ನಮ್ಮ ಜನರು ಬರದಿಂದ ತತ್ತರಿಸಿ ಕೇಂದ್ರದ ನೆರವಿಗೆ ಮೊರೆ ಇಟ್ಟಾಗ ಇವರಿಗೆ ಯಾಕೆ ಈ ಆಕ್ರೋಶ ಬರಲಿಲ್ಲ? ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.
ನಮ್ಮ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾದಾಗ ಈ ಸಂಸದರಿಗೆ ಯಾಕೆ ಆಕ್ರೋಶ ಹುಟ್ಟಲಿಲ್ಲ? ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ? ನಮ್ಮ ಬಿಜೆಪಿ ಸಂಸದರುಗಳಿಗೆ ಆಕ್ರೋಶ ಬಂದು ಬೀದಿಗಿಳಿಯಬೇಕಾದರೆ ಒಂದೋ ಚುನಾವಣೆ ಬರಬೇಕು ಇಲ್ಲವಾದಲ್ಲಿ ಯಾವುದಾದರೂ ಕೋಮು ಪ್ರಚೋಧನೆ ನೀಡುವ ಘಟನೆ ನಡೆಯಬೇಕು. ಆಗ ಸಮಾಜದ ನೆಮ್ಮದಿಗೆ ಬೆಂಕಿ ಹಚ್ಚಿ ತಮ್ಮ ಮತವನ್ನು ಸುಭದ್ರಗಳಿಸಿಕೊಳ್ಳಲು ಇವರು ಬೀದಿಗಿಳಿಯುತ್ತಾರೆ ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸಂತೋಷದ ವಿಷಯ. ಆದರೆ ಈ ಪ್ರತಿಭಟನೆ ಯಾವ ಪುರುಷಾರ್ಥಕ್ಕಾಗಿ?
ಸಮಾಜದ ಶಾಂತಿ ಭಂಗ ಉಂಟುಮಾಡುವವರ ವಿರುದ್ಧ ನಮ್ಮ ಸರ್ಕಾರ ತೀಕ್ಷ್ಣ ಕ್ರಮ ಕೈಗೊಳ್ಳಲಿದೆ. ಆದರೆ ಇಂತಹ ಘಟನೆಗಳು ನಡೆದಾಗ ಇವರಲ್ಲಿ ಹುಟ್ಟುವ ಈ ಆಕ್ರೋಶ,… pic.twitter.com/UYOVYtEqcR
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 19, 2024
ಭಾರತೀಯ ವಿದ್ಯಾರ್ಥಿ ಯುಎಸ್‌ನಲ್ಲಿ ಶವವಾಗಿ ಪತ್ತೆ: 2024ರ 9ನೇ ಕೊ*ಲೆ ಕೇಸ್ ಇದು..
ಟಿಕೇಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಸಂಸದ ಮುನಿಸ್ವಾಮಿ ಏನು ಹೇಳಿದರು ಗೊತ್ತಾ..?