Political News: ಹುಬ್ಬಳ್ಳಿ:‘ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ. ಸರ್ವರಿಗೂ ಸಮಬಾಳು ಸಮಪಾಲು ಎಂಬುವಂತ ರೀತಿಯಲ್ಲಿ ಹೇಳಿದ್ದಾರೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದರು.
ಸಿದ್ದರಾಮಯ್ಯ ಅವರು ಯಾವ ಸಮಾವೇಶದಲ್ಲಿ ಹೇಳಿದ್ದಾರೆ ಅನ್ನೋದು ಮುಖ್ಯ. ಮುಸ್ಲಿಂ ಸಮಾವೇಶದಲ್ಲಿ ಮುಸ್ಲಿಮರಿಗೆ ಏನು ಮಾಡುತ್ತೇವೆ ಅನ್ನೋದು ಹೇಳಬೇಕಾಗುತ್ತದೆ. ಬೇರೆ ಸಮಾವೇಶದಲ್ಲಿ ಬೇರೆಯವರಿಗೆ ಏನು ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಇದರಲ್ಲಿ ತಪ್ಪು ಹುಡುಕೋ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಅವರು ಹೇಳಿದರು.
ಚೀನಾದಲ್ಲಿ ಹೊಸ ವೈರಸ್ ಪತ್ತೆ ವಿಚಾರವಾಗಿ ಮಾತನಾಡಿದ ಅವರು, ಇದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಾಗಲಿ ಯಾವುದೇ ಸಂಸ್ಥೆಯಾಗಲಿ ಎಚ್ಚರಿಕೆಗಳನ್ನು ನೀಡಿಲ್ಲ ಎಂದ ಅವರು, ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಸಿನ್ ಕೊರತೆ ವಿಚಾರವಾಗಿ ಮಾತನಾಡಿದ ಅವರು, ಬೇರೆ ಬೇರೆ ಕಾರಣಗಳಿಂದ ಔಷಧ ಕೊರತೆಯಾಗ್ತಿದೆ. ಈ ಸಮಸ್ಯೆ ಸರಿಪಡಿಸಲು ಯತ್ನಿಸುತ್ತೇನೆ ಎಂದು ಅವರು ಭರವಸೆ ನೀಡಿದರು.
‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’
‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’