Political News: ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಿ ಎಂದು ಓರ್ವ ಶಿಕ್ಷಕ ರಕ್ತದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅರಿಗೆ ಪತ್ರ ಬರೆದಿರುವ ಘಟನೆ Shivamoggaದಲ್ಲಿ ನಡೆದಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅಶೋಕ್, ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡದೆ ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ, ಕೊನೆಗೆ ಕನ್ನಡ ಶಿಕ್ಷಕರೊಬ್ಬರು ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆಯುವಂತಹ ದಯನೀಯ ಸ್ಥಿತಿ ನಿರ್ಮಾಣವಾಗಿರುವುದು ಪ್ರತಿಯೊಬ್ಬ ಕನ್ನಡಿಗನೂ ತಲೆತಗ್ಗಿಸುವಂತೆ ಮಾಡಿದೆ! ಎಂದು ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಕನ್ನಡ ವಿರೋಧಿ ಧೋರಣೆಗೆ ಸಾಕ್ಷಿಗಳು ಎಂದು ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಈ ರೀತಿಯಾಗಿ ಘಟಮೆ ಸಮೇತವಾಗಿ, ಸಾಲು ಸಾಲು ಆರೋಪ ಮಾಡಿದ್ದಾರೆ.
ರಕ್ತದಲ್ಲಿ ಪತ್ರ ಬರೆದ ಶಿಕ್ಷಕ: ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಿ ಎಂದು ಬೇಡಿಕೊಂಡು ಬೇಸತ್ತ ಶಿಕ್ಷಕ ಪ್ರಶಾಂತ್ ಎಂಬುವವರು, ಶಿಕ್ಷಣರಿಗೆ ತಮ್ಮ ರಕ್ತದಲ್ಲಿ ಪತ್ರ ಬರೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ!
1995ರ ನಂತರದ ಶಾಲೆಗಳಿಗೆ ಅನುದಾನ ಬಂದ್: 1995ರ ನಂತರ ಆರಂಭವಾಗಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ರಾಜ್ಯ ಸರ್ಕಾರ ಅನುದಾನವನ್ನೇ ಸಂಪೂರ್ಣವಾಗಿ ನಿಲ್ಲಿಸಿ, ಕನ್ನಡ ಶಾಲೆಗಳು ಮುಚ್ಚಿಹೋಗುವಂತೆ ಸಂಚು ರೂಪಿಸಿದೆ.
ಸುಳ್ಳು ಭರವಸೆ, ಹುಸಿ ಆಶ್ವಾಸನೆ: ಬೆಂಗಳೂರಿನಲ್ಲಿ ಶಿಕ್ಷಕರು ಧರಣಿ ನಡೆಸಿದಾಗ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿ, ಬಳಿಕ ಯಾವುದೇ ಕ್ರಮ ಕೈಗೊಳ್ಳದೆ ಶಿಕ್ಷಣ ಇಲಾಖೆ ಬೆನ್ನಿಗೆ ಚೂರಿ ಹಾಕಿದೆ.
ಖಾಲಿ ಮಾತು, ಶೂನ್ಯ ಸಾಧನೆ: ವೇದಿಕೆಯ ಮೇಲೆ ಕನ್ನಡದ ಬಗ್ಗೆ ದೊಡ್ಡ ಮಾತುಗಳನ್ನಾಡುವ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಈಗ ಕನ್ನಡ ಶಾಲೆಗಳಿಗೆ ಅನುದಾನ ನೀಡದೆ ಅವುಗಳ ‘ರಕ್ತವನ್ನೇ’ ಹೀರುತ್ತಿದ್ದಾರೆ!
ನವೆಂಬರ್ 1ರ ಒಳಗೆ ಈ ಬೇಡಿಕೆ ಈಡೇರದಿದ್ದರೆ ರಾಜ್ಯದ ಉಳಿದ ಕನ್ನಡ ಶಿಕ್ಷಕರೂ ರಕ್ತದಲ್ಲಿ ಪತ್ರ ಬರೆಯುವುದಾಗಿ ಎಚ್ಚರಿಸಿದ್ದಾರೆ. ಕನ್ನಡ ನಾಡಿನಲ್ಲಿ ಕನ್ನಡ ಶಾಲೆಗಳನ್ನು ರಕ್ಷಿಸಲು ಶಿಕ್ಷಕರು ರಕ್ತ ಹರಿಸಬೇಕಾದ ಸ್ಥಿತಿ ಬಂದಿರುವುದು ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಕಪ್ಪು ಚುಕ್ಕೆ ಎಂದು ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳೇ, ಕೇವಲ ಭಾಷಣಗಳಲ್ಲಿ ಕನ್ನಡ ಪ್ರೇಮ ಮೆರೆಯುವುದನ್ನು ಬಿಟ್ಟು, ತಕ್ಷಣವೇ 1995ರ ನಂತರದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಿ! ಇಲ್ಲದಿದ್ದರೆ ಈ ‘ಕನ್ನಡ ವಿರೋಧಿ’ ಕಾಂಗ್ರೆಸ್ ಸರ್ಕಾರವನ್ನು ಕನ್ನಡಿಗರು ಕ್ಷಮಿಸುವುದಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.




