Tuesday, November 18, 2025

Latest Posts

ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ, ಏನಿದು ‘ಸಾಹುಕಾರ’ನ ಲೆಕ್ಕಾಚಾರ!?

- Advertisement -

ಪ್ರತಿಷ್ಠಿತ ‌ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​​​ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ ಅಧಿಪತಿ ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ವಿಶೇಷ ಅಂದ್ರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಜಾರಕಿಹೊಳಿ ಬ್ರದರ್ಸ್ ನುಡಿದಂತೆ ನಡೆದುಕೊಂಡಿದ್ದಾರೆ. ಬಹು ನಿರೀಕ್ಷಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಸ್ಪಷ್ಟವಾಗಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಬ್ಯಾಂಕ್‌ನಲ್ಲಿ 30-30 ತಿಂಗಳು ಅಧಿಕಾರ ಹಂಚಿಕೆ ಸೂತ್ರ ಜಾರಿಯಾಗಿದೆ. ಅಂದರೆ, ಮೊದಲ 30 ತಿಂಗಳು ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿದ್ದು, ನಂತರದ ಅವಧಿಗೆ ಕಾಂಗ್ರೆಸ್ ಪಾಲಿಗೆ ಅಧಿಕಾರ ಬರತ್ತೆ. ಅಧ್ಯಕ್ಷ ಸ್ಥಾನವನ್ನು ಬಿಜೆಪಿಯವರಿಗೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಡಿಸಿಸಿ ಬ್ಯಾಂಕ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಪರಸ್ಪರ ಒಪ್ಪಂದದ ಮೇರೆಗೆ ನಿರ್ಧಾರ ಕೈಗೊಂಡಿದ್ದೇವೆ. ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ಅಧ್ಯಕ್ಷರಾಗಿ, ರಾಜು ಕಾಗೆ ಅವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು. ಈ ಹಿಂದೆ ನಾವು ಮೂವರು ಇದ್ದಾಗ ಬಿಜೆಪಿಯವರು ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದರು. ಈಗ ಅದೇ ಪರಂಪರೆಯನ್ನು ಮುಂದುವರಿಸಿ, ನಾವು ಬಿಜೆಪಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದೇವೆ.

ಜೊಲ್ಲೆಯವರು ನಮ್ಮನ್ನು ನಂಬಿ ಬಂದಿದ್ದರಿಂದ ಅವರನ್ನು ಗೆಲ್ಲಿಸಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದರು.ಈ ಮೂಲಕ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯು ಪಕ್ಷಾತೀತ ಒಪ್ಪಂದದ ಮೂಲಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಹೊಸ ಅಧ್ಯಕ್ಷ-ಉಪಾಧ್ಯಕ್ಷರ ನೇತೃತ್ವದಲ್ಲಿ ಬ್ಯಾಂಕ್‌ನ ಕಾರ್ಯಾಚರಣೆ ಮುಂದುವರಿಯಲಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss