ಸಿನಿಮಾ ಸೆಲೆಬ್ರಿಟಿಗಳು ಒಂದು ಹಂತಕ್ಕೆ ತಲುಪಿದ ಬಳಿಕ ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಮತ್ತು ಅವರು ಮಾಡುವ ಪಾತ್ರಗಳ ಬಗ್ಗೆ ಹೆಚ್ಚು ಗಮನವಹಿಸುತ್ತಾರೆ. ಕೆಲವು ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಲು ಒಂದು ದೊಡ್ಡ ಚಾನ್ಸ್ ತೆಗೆದುಕೊಳ್ಳುತ್ತಾರೆ. ಧೈರ್ಯ ಮಾಡಿ ಮುನ್ನುಗ್ಗುತ್ತಾರೆ. ಇದೇ ರೀತಿ ರಶ್ಮಿಕಾ ಮಂದಣ್ಣ ಸಹ ಇದೀಗ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.
ಅಲ್ಲು ಅರ್ಜುನ್ ಮುಂಬರುವ ಸಿನಿಮಾ AA22XA6 ಗಾಗಿ ಅಟ್ಲಿ ಅವರೊಂದಿಗೆ ಕೈಜೋಡಿಸಿದ್ದಾರೆ. ಚಿತ್ರದ ಟೈಟಲ್ ಮಾತ್ರ ಇನ್ನೂ ಬಹಿರಂಗಪಡಿಸಿಲ್ಲ. ಈಗಾಗಲೇ ಅಲ್ಲು ಅರ್ಜುನ್ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಇದೀಗ ಚಿತ್ರದ ಬಗ್ಗೆ ಒಂದು ದೊಡ್ಡ ಅಪ್‌ಡೇಟ್ ಹೊರ ಬಿದ್ದಿದ್ದು ಸಿನಿಪ್ರಿಯರು ಶಾಕ್ ಆಗಿದ್ದಾರೆ. ಅಲ್ಲು ಜೊತೆ ರೊಮ್ಯಾಂಟಿಕ್ ಪಾತ್ರಗಳಲ್ಲಿ ನಟಿಸಿದ್ದ ನಟಿ ರಶ್ಮಿಕಾ ಮಂದಣ್ಣ ಈಗ ಈ ಸಿನಿಮಾದಲ್ಲಿ ಖಳನಾಯಕಿ ಪಾತ್ರದಲ್ಲಿ ನಟಿಸಲಿದ್ದಾರೆ.
ಅಲ್ಲು ಅರ್ಜುನ್ ಅವರ AA22XA6 ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿನ ರಶ್ಮಿಕಾ ಪಾತ್ರವು ಸಾಕಷ್ಟು ವಿಭಿನ್ನ ಮತ್ತು ಸವಾಲಿನದ್ದಾಗಿದೆ ಹಾಗೂ ರಶ್ಮಿಕಾ ಚಿತ್ರಕ್ಕಾಗಿ ತಮ್ಮ ಲುಕ್ ಟೆಸ್ಟ್ ಅನ್ನು ಪೂರ್ಣಗೊಳಿಸಿದ್ದಾರೆ ಮತ್ತು ಅಕ್ಟೋಬರ್‌ನಿಂದ ಚಿತ್ರೀಕರಣ ಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ವರದಿ ಹೇಳುತ್ತದೆ. ಇತ್ತೀಚೆಗೆ ರಶ್ಮಿಕಾ ನಿರ್ದೇಶಕ ಅಟ್ಲಿ ಮತ್ತು ಅಲ್ಲು ಅರ್ಜುನ್ ಅವರೊಂದಿಗೆ ಲಾಸ್ ಏಂಜಲೀಸ್‌ಗೂ ಕೂಡ ಹೋಗಿದ್ದರು.
ಇನ್ನು ಈ ಸಿನಿಮಾದ ಚಿತ್ರೀಕರಣ 2026 ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಮತ್ತು ಈವರೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಚಿತ್ರವು 2026 ರ ಕೊನೆಯಲ್ಲಿ ಅಥವಾ 2027 ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ