ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಯಲ್ಲಿ ಇರಲಿದೆ – ಸಿಎಂ ಬೊಮ್ಮಾಯಿ

ನವದೆಹಲಿ : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

About The Author