Saturday, April 19, 2025

Latest Posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

- Advertisement -

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು ಅಂಥ ನಿರ್ಧಾರ ಮಾಡಿಲ್ಲ. ಮಾಡಿದ್ದರೆ ನಿಮಗೇ ತಿಳಿಸುತ್ತೇನೆ ಎಂದಿದ್ದಾರೆ.

ಅಲ್ಲದೇ, ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಬಗ್ಗೆ ನನಗಿಂತ ಹೆಚ್ಚು ನಿಮಗೆ ಉತ್ಸುಕತೆ ಇದ್ದಂತೆ ತೋರುತ್ತದೆ ಎಂದು ಮಾಧ್ಯಮದವರಿಗೆ ಹೇಳಿದ ಕಮಲ್ ನಾಥ್, ನಾನು ಇನ್ನೂ ಯಾವ ನಿರ್ಧಾರವನ್ನೂ ಮಾಡಿಲ್ಲವೆಂದು ಹೇಳಿದ್ದಾರೆ. ಕಮಲ್‌ನಾಥ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ಇವರೇನಾದರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಸಿದರೆ, ಕಾಂಗ್ರೆಸ್‌ಗೆ ದೊಡ್ಡ ಪೆಟ್ಟು ಬೀಳೋದಂತೂ ಗ್ಯಾರಂಟಿ.

ಆದರೆ ದಿಗ್ವಿಜಯ್ ಸಿಂಗ್ ಈ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಇಂದಿರಾಗಾಂಧಿ ಕಾಲದಿಂದಲೂ ಕಮಲ್‌ನಾಥ್ ಕಾಂಗ್ರೆಸ್‌ನಲ್ಲಿ ಇದ್ದವರು. ಇಂದಿರಾ ಗಾಂಧಿಯನ್ನು ಜೈಲಿಗೆ ಕಳುಹಿಸಿದಾಗ, ಗಾಂಧಿ ಕುಟುಂಬದೊಂದಿಗೆ ರಾಜಕೀಯ ಪಯಣ ಆರಂಭಿಸಿದ ಕಮಲ್‌ ನಾಥ್ ಎಂದಿಗೂ ಕಾಂಗ್ರೆಸ್ ತೊರೆಯುವುದಿಲ್ಲವೆಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ

ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ

ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

- Advertisement -

Latest Posts

Don't Miss