Tuesday, April 15, 2025

Latest Posts

ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

- Advertisement -

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು ಜನರಿಗೆ ತಲುಪುತ್ತದೆ. ಯಾವುದೇ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧವಿಲ್ಲ. ಸಂವಿಧಾನವನ್ನು ರಕ್ಷಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.
ಇನ್ನೂ ಇಂಡಿಯಾ ಮೈತ್ರಿಕೂಟದ ನಾಯಕರು ಜೊತೆಯಾಗಿ ಸಂಸತ್‌ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸದಸ್ಯರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದರು.

- Advertisement -

Latest Posts

Don't Miss