Political News: ಸಿ.ಟಿ.ರವಿ ಜೈಲಿನಿಂದ ರಿಲೀಸ್ ಆಗಿದ್ದು, ತಮಗೆ ಬೆಂಬಲಿಸಿದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ನನ್ನ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ನನ್ನ ಜೊತೆಗಿದ್ದು ಧೈರ್ಯ ತುಂಬಿದ ನನ್ನ ನೆಚ್ಚಿನ ಬಿಜೆಪಿ ಕಾರ್ಯಕರ್ತ ಬಂಧುಗಳಿಗೆ, ಜೊತೆಗೆ ನಿಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ, ಬಿಜೆಪಿ ಎಲ್ಲಾ ರಾಷ್ಟೀಯ ನಾಯಕರು, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ , ಶಾಸಕರು ವಿಧಾನ ಪರಿಷತ್ತ್ , ವಿಧಾನಸಭೆ ಶಾಸಕರು, ಸಂಸದರು, ಮಾಜಿ ಸಚಿವರು, ಹಿರಿಯ ನಾಯಕರು, ಸ್ನೇಹಿತರು, ಮಾಧ್ಯಮದ ಮಿತ್ರರಿಗೆ ಧನ್ಯವಾದಗಳು ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ರಾಜ್ಯಾದ್ಯಂತ ತುಘಲಕ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ನನ್ನ ಕಾರ್ಯಕರ್ತ ಬಂಧುಗಳೆ, ನಿಮ್ಮೆಲ್ಲರ ಬೆಂಬಲ ನನ್ನ ಶಕ್ತಿಯನ್ನು ಮತ್ತಷ್ಟು ಇಮ್ಮುಡಿಗೊಳಿಸಿದೆ, ದುಷ್ಟ ಶಕ್ತಿಗಳ ವಿರುದ್ಧ ಇನ್ನೂ ಹೆಚ್ಚಾಗಿ ಹೋರಾಡಲು ಶಕ್ತಿ ತುಂಬಿದೆ. ಭಾರತೀಯ ಜನತಾ ಪಾರ್ಟಿಯ ನಾವೆಲ್ಲರೂ ಒಂದಾಗಿ ಕರ್ನಾಟಕವನ್ನು “ಗೂಂಡಾ ರಿಪಬ್ಲಿಕ್” ಮಾಡಲು ಅವಕಾಶ ಕೊಡುವುದಿಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.