Sunday, September 8, 2024

Latest Posts

ಲೋಕಸಭೆಗೆ ಎಂಟ್ರಿಕೊಡ್ತಾರಾ ಪ್ರಿಯಾಂಕಾ? ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ!

- Advertisement -

Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಯನಾಡಿನಲ್ಲಿ ಸತತ ಎರಡನೇ ಬಾರಿ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿರುವ ರಾಹುಲ್ ಗಾಂದಿ, ಇದೀಗ ಅನಿವಾರ್ಯವಾಗಿ ಆ ಕ್ಷೇತ್ರವನ್ನು ತ್ಯಜಿಸಬೇಕಾಗಿದೆ. ಹೀಗಾಗಿ ವಯನಾಡಿನ ಕಾಂಗ್ರೆಸ್‌ ಕಾರ್ಯಕರ್ತರು, ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಲಿ, ರಾಹುಲ್ ಗಾಂಧಿ ಆಗಲಿ ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಇದೇ ಜೂನ್ 11ರಂದು ವಯನಾಡಿಗೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ, ಒಂದು ವೇಳೆ ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ 2-3 ಲಕ್ಷ ಮತಗಳ ಅಂತರಿಂದ ಗೆಲ್ಲುತ್ತಿದ್ದರು ಎಂದು ಹೇಳಿದ್ದರು. ಆ ಮೂಲಕ ಅವರು ಪ್ರಿಯಾಂಕಾ ಅವರ ಚೊಚ್ಚಲ ಸ್ಪರ್ಧೆಯ ಸುಳಿವು ನೀಡಿದ್ದರಾ ಎನ್ನುವ ಅನುಮಾನವೂ ಮೂಡಿದೆ.

2024ರ ಲೋಕಸಭಾ ಚುನಾವಣೆಯ ಆರಂಭದಲ್ಲಿ ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಕೊನೆಯ ಕ್ಷಣದಲ್ಲಿ ತಾಯಿ ಸೋನಿಯಾ ಗಾಂಧಿಯಿಂದ ತೆರವಾಗಿದ್ದ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸಿದ್ದರು. ಅಲ್ಲದೇ, ವಾರಣಾಸಿ ಕ್ಷೇತ್ರದಲ್ಲಿ ಮೋದಿ ಅಲೆಯನ್ನು ತಡೆಯಲು ಕಾಂಗ್ರೆಸ್ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲಿದೆ ಎಂದು ಊಹಿಸಲಾಗಿತ್ತು. ಆದರೆ, ಅವರು ಸ್ಪರ್ಧಿಸಲಿಲ್ಲ.

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾಯಣೆಯಲ್ಲಿಯೂ ಅಬ್ಬರ ಪ್ರಚಾರ ನಡೆಸಿದ್ದ ಪ್ರಿಯಾಂಕಾ, ಚುನಾವಣಾ ಕಣಕ್ಕೆ ಎಂಟ್ರಿಕೊಡುತ್ತಾರೆ ಎಂದು ಹೇಲಾಗುತ್ತಿತ್ತು. ಆಗಲೂ ಪ್ರಿಯಾಂಕಾ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯಲಿಲ್ಲ.

ಇದೀಗ ರಾಹುಲ್‌ ಗಾಂಧಿ ವಯನಾಡು ಕ್ಷೇತ್ರವನ್ನು ತ್ಯಜಿಸಿದರೆ, ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಬ್ಯಾನರ್‌ ಹಿಡಿದು ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?

Sandalwood News: ಕೊನೆಗೂ ಸತ್ಯ ಬಾಯ್ಬಿಟ್ಟ ದರ್ಶನ್ ಮತ್ತು ಪವಿತ್ರಾ

- Advertisement -

Latest Posts

Don't Miss