ಮಾಜಿ ಪ್ರಧಾನಿ ದೇವೇಗೌಡರ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್.ಡಿ. ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಳೆ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಹಾಗೂ ಸಚಿವರನ್ನು ಕರೆಯಲಾಗುತ್ತಿದೆ. ಸಭೆಯಲ್ಲಿ ಮಾಜಿ ಪ್ರಧಾನಿಗಳ ಪತ್ರದ ಸಾರವನ್ನು ಅವಲೋಕಿಸಲಾಗುವುದು. ಅವರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ತೀರ್ಮಾನಿಸಿ ಉತ್ತರ ನೀಡಲಾಗುವುದು ಎಂದು ತಿಳಿಸಿದರು.

About The Author