Friday, August 29, 2025

Latest Posts

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

- Advertisement -

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್ ಏನು..? ಅಶೋಕ್ ವಿವರಿಸಿದ್ದೇನು ಅಂತಾ ಇಲ್ಲಿದೆ ನೋಡಿ..

ಕಾಂಗ್ರೆಸ್ ಪಕ್ಷದ “ಮತಗಳ್ಳತನ”ವನ್ನ ಬಯಲು ಮಾಡಿದ ಸಿದ್ದರಾಮಯ್ಯ!

1991ರಲ್ಲಿ ಮಾನ್ಯ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದು

ಎಲ್ಲಿಂದ? – ಕೊಪ್ಪಳ ಲೋಕಸಭಾ ಕ್ಷೇತ್ರದಿಂದ

ಯಾವ ಪಕ್ಷದಿಂದ? – ಜನತಾದಳ ಪಕ್ಷದಿಂದ

ಸಿದ್ದರಾಮಯ್ಯವರವನ್ನ ಮೋಸದಿಂದ ಸೋಲಿಸಿದ್ದು ಯಾರು? – ಕಾಂಗ್ರೆಸ್ ಪಕ್ಷ

“ಮತಗಳ್ಳತನ”ದ ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಅತ್ಯಂತ ಅಗೌರವವಾಗಿ ಸಂಪುಟದಿಂದ ವಜಾ ಮಾಡಿದ್ದ ರಾಹುಲ್ ಗಾಂಧಿ ಅವರಿಗೆ, ಈಗ ಕಾಂಗ್ರೆಸ್ ಪಕ್ಷದ ಮೋಸವನ್ನು ಬಯಲು ಮಾಡಿರುವ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ? ಅಥವಾ ಕಾಂಗ್ರೆಸ್ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತನಾ? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.

2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಮತ ಖರೀದಿ ಮೂಲಕ ಗೆದ್ದರು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಈಗಾಗಲೇ ಬಯಲು ಮಾಡಿದ್ದಾರೆ. ಪಂಚಾಯಿತಿ ಇಂದ ಪಾರ್ಲಿಮೆಂಟ್ ವರೆಗೆ ಕಾಂಗ್ರೆಸ್ ಪಕ್ಷದ ಏಕಚಕ್ರಾಧಿಪತ್ಯ ಇದ್ದ ಕಾಲದಲ್ಲಿ, “ಆಗೆಲ್ಲಾ ಇವಿಎಂ ಇರಲಿಲ್ಲ, ಒಬ್ರೋ ಇಬ್ರೋ ಕೂತ್ಕೊಂಡು ಒತ್ತು ಬುಡ್ರೋ ಅನ್ನೋರು” ಎಂದು ಕಾಂಗ್ರೆಸ್ ಪಕ್ಷ 60 ವರ್ಷ ಹೇಗೆ ಚುನಾವಣೆ ಗೆಲ್ಲುತ್ತಿತ್ತು ಎನ್ನುವುದನ್ನ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಲೀಲಾಜಾಲವಾಗಿ ವಿವರಿಸಿದ್ದಾರೆ.

ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮದ ಪಿತಾಮಹ ಯಾರಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ನೆಹರೂ-ಗಾಂಧಿ ಕುಟುಂಬ. ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅವರು ಮಾತನಾಡಿದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

- Advertisement -

Latest Posts

Don't Miss