ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೊರೊನಾ ತಗುಲಿದ್ದು, ಅವರು ಬೇಗ ಗುಣಮುಖರಾಗಲೆಂದು ಹಲವು ಗಣ್ಯರು ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ.- ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ.- ಮಾಜಿ ಪ್ರಧಾನಿ ದೇವೇಗೌಡರು
ಮಾಜಿ ಮುಖ್ಯಮಂತ್ರಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಿ ತಮ್ಮ ದೈನಂದಿನ ಚಟುವಟಿಕೆಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ.- ಸದಾನಂದಗೌಡ
ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಕೂಡ ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.
ವಿರೋಧ ಪಕ್ಷದ ನಾಯಕರು, ಆತ್ಮೀಯರಾದ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದಷ್ಟು ಶೀಘ್ರವಾಗಿ ಅವರು ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ.- ಮಲ್ಲಿಕಾರ್ಜುನ ಖರ್ಗೆ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




