www.karnatakatv.net:ಮುಂಬೈ: ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 2012 ರಲ್ಲಿ ಸಂಭವಿಸಿದ್ದ ನಿರ್ಭಯಾ ಹತ್ಯೆ ಪ್ರಕರಣವನ್ನೇ ಹೋಲುವಂತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ.
ನಿನ್ನೆ ಬೆಳಗಿನ ಜಾವ ಮುಂಬೈನ ಸಾಕಿನಾಕ ಪ್ರದೇಶದಲ್ಲಿ ಮಹಿಳೆಯೊಬ್ಬಯಳ ಘನಘೋರ ರೀತಿಯಲ್ಲಿ ಅತ್ಯಾಚಾರ ನಡೆದಿದೆ. ನಿಲ್ಲಿಸಲಾಗಿದ್ದ ಟೆಂಪೋದಲ್ಲಿ ಈ ಕುಕೃತ್ಯವೆಸಗಲಾಗಿದ್ದು, ಮಹಿಳೆಗೆ ಬರ್ಬರವಾಗಿ ಚಿತ್ರಹಿಂಸೆ ನೀಡಲಾಗಿದೆ. ಘಟನೆ ಬಳಿಕ ಮಹಿಳೆ ತೀವ್ರವಾಗಿ ಅಸ್ವಸ್ಥಗೊಂಡಿದ್ರು.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರಿಗೆ ಟೆಂಪೋದಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ ಮಹಿಳೆಯನ್ನು ಕಂಡು ಹೌಹಾರಿದ್ರು. ಕೂಡಲೇ ಆಕೆಯನ್ನುಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ರು. ಆದ್ರೆ ತೀವ್ರ ರೀತಿಯಲ್ಲಿ ಗಾಯಗೊಂಡಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 45 ವರ್ಷದ ಮೋಹನ್ ಚೌಹಾಣ್ ಎಂಬಾತನನ್ನ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸ್ತಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚುವರಿ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ ಟಿವಿ- ಮುಂಬೈ