ಬೆಂಗಳೂರಿನಲ್ಲಿ ಜಿಮ್ ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಂತ ಸಂದರ್ಭದಲ್ಲಿಯೇ ಕುಸಿದು ಬಿದ್ದು, ಗೋಲ್ಡಲ್ ಹವರ್ ಅಮೂಲ್ಯ ಸಮಯವೂ ಸಿಗದಂತೆ ಸಾವನ್ನಪ್ಪಿದ ಘಟನೆ, ಬೆಂಗಳೂರಿನ ಮಲ್ಲೇಶನ ಪಾಳ್ಯದಲ್ಲಿ ನಡೆದಿದೆ.

ಬೆಂಗಳೂರಿನ ಮಲ್ಲೇಶಪಾಳ್ಯದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ವಿನಯ ಕುಮಾರಿ (44) ಎಂಬಾಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಬಂದಿದ್ದಂತ ವಿನಯ ಕುಮಾರಿ ಅವರು, ಬೆಳಿಗ್ಗೆ 8 ಗಂಟೆಗೆ ಜಿಮ್ ಗೆ ವರ್ಕೌಟ್ ಮಾಡೋದಕ್ಕಾಗಿ ತೆರಳಿದ್ದರು. ಈ ವೇಳೆ ಬೆಳಿಗ್ಗೆ 8 ಗಂಟೆಗೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

About The Author