- Advertisement -
ಒಂದು ಊರಿನಿಂದ ಇನ್ನೊಂದು ಊರಿಗೆ ಹೋಗುವಾಗ ಬಸ್ಸಿನಲ್ಲಿ, ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳುವಾಗ ಆಟೋದಲ್ಲಿ, ಅಥವಾ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆ ಆ್ಯಂಬುಲೆನ್ಸ್‌ನಲ್ಲಿ ಹೆರಿಗೆ ಆಗುವುದನ್ನ, ತಾಯಿ ಮಗು ಆರೋಗ್ಯವಾಗಿರುವುದನ್ನ ನಾವು, ನೋಡಿದ್ದೇವೆ ಮತ್ತು ಕೇಳಿದ್ದೇವೆ. ಆದ್ರೆ ನಿನ್ನೆ ಸಂಜೆ ನಡೆದ ಹೆರಿಗೆ ಕೇಸ್ ಸಖತ್ ಇಂಟ್ರೆಸ್ಟಿಂಗ್ ಆಗಿದೆ.
ಇಂಡಿಗೋ ವಿಮಾನ ಹಾರಾಟವಾಗುವ ಸಂದರ್ಭದಲ್ಲಿ ವಿಮಾನದಲ್ಲೇ ಹೆರಿಗೆ ನೋವು ಕಾಣಿಸಿಕೊಂಡು, ಅಲ್ಲಿದ್ದ ಸಿಬ್ಬಂದಿಗಳು ಮತ್ತು ಕೆಲ ಜನರ ಸಹಾಯದಿಂದ ಮಹಿಳೆಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಈ ವಿಮಾನ ನಿನ್ನೆ ಸಂಜೆ 7.30ರ ಸುಮಾರಿಗೆ ದೆಹಲಿಯಿಂದ ಬೆಂಗಳೂರಿಗೆ ಹೊರಟಿತ್ತು. ಈ ವೇಳೆ ಬೆಂಗಳೂರಿನ ಏರ್‌ಪೋರ್ಟ್‌ಗೆ ಧಾವಿಸಿದ ವೈದ್ಯರು ತಾಯಿ ಮಗುವನ್ನ ತಪಾಸಣೆ ಮಾಡಿ, ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.
- Advertisement -