Belagavi News: ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನೆಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ. ಘಟನೆ ನಡೆದ ದಿನ ರಾತ್ರಿ ಮೂರು ಗಂಟೆಗೆ ಠಾಣೆಯ ಕಾನ್ಸ್‌ಟೇಬಲ್ ದೂರವಾಣಿ ಕರೆ ಮುಖಾಂತರ ಸಿಪಿಐಗೆ ಮಾಹಿತಿ ನೀಡಿದ್ದರು. ಆದರೆ, ಬೆಳಗ್ಗೆ 7 ಗಂಟೆಗೆ ಸಿಪಿಐ ವಿಜಯ್ ಸಿನ್ನೂರ್ ಘಟನಾ ಸ್ಥಳಕ್ಕೆ ತೆರಳಿದ್ದರು. ಈ ಕುರಿತು ಎಸಿಪಿ ಅವರು ಬೆಳಗಾವಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದರು.
ಘಟನೆ ವಿವರ
ಇದೇ ತಿಂಗಳ 11 ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಓರ್ವ ಮಹಿಳೆಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಬಳಿಕ ಈ ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದ ಹಿನ್ನಲೆ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದರು. ರಾಜ್ಯವೇ ತಲೆತಗ್ಗಿಸುವಂತ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.
ಈ ಕುರಿತು ಘಟನಾ ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಕಮಿಷನರ್ ಸಿದ್ದರಾಮಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ಪ್ರಕರಣ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸ್ತಿದ್ದೇವೆ. ಮಹಿಳೆಯನ್ನ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಮಾಹಿತಿ ಬಂದ ಕೂಡಲೇ ನಮ್ಮ ಸಿಬ್ಬಂದಿ ಬಂದು ತಕ್ಷಣ ಮಹಿಳೆ ರಕ್ಷಣೆ ಮಾಡಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎಂದಿದ್ದರು.
ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ
‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’




