state news;
ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು. ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಈ ಕುರಿತಾಗಿ ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ K.S.ನವೀನ್ ಪತ್ರಿಕಾಗೋಷ್ಠಿ ಮಾಡಿದ್ದು, ತುಮಕೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿಯಾಗಿದೆ. ಎರಡು ದಿನಗಳ ಕಾಲ ನಡೆಯಲಿದೆ. ರಾಷ್ಟ್ರೀಯ ಮತ್ತು ರಾಜ್ಯದ 37 ಘಟಕದ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸ್ ಉದ್ಘಾಟನೆ ಮಾಡಲಿದ್ದಾರೆ ಇನ್ನೂ ಸಮಾರೋಪ ಸಮಾರಂಭದಲ್ಲಿ ಬಿ.ಎಲ್ ಸಂತೋಷ್ ಭಾಗವಹಿಸಲಿದ್ದಾರೆ.