- Advertisement -
ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆಯನ್ನು ಮುಂದುವರೆಸಿದ ಪೊಲೀಸರು ಘಟನೆ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
- Advertisement -