ನಿಪ್ಪಾಣಿ: ಗಣೇಶ ಹಬ್ಬದ ದಿನ ಮಾನ್ಯ ಪ್ರಧಾನಿಮಂತ್ರಿಗಳು ಮಹಿಳಾ ಮೀಸಲಾತಿ ಅಂಗಿಕಾರ ಹಿನ್ನೆಲೆ ದೇಶಾದ್ಯಂತ ಮಹಿಳೆಯರು ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಬೆಳಗಾವಿಯ ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರು ವಿಜಯೋತ್ಸವ ಆಚರಿಸಿದರು.
ನಿಪ್ಪಾಣಿ ತಾಲೂಕಿನಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ನಂತರ ಮಾತನಾಡಿದ ಶಾಸಕಿ ಶಶಿಕಲಾ ಜೊಲ್ಲೆ ನಮ್ಮ ದೇಶದ ಇತಿಹಾಸದಲ್ಲಿ ಮಹಿಳಾ ಮೀಸಲಾತಿ ಅಂಗಿಕಾರ ಆಗಿರುವುದನ್ನು ಸುವರ್ಣಾಕ್ಷರದಲ್ಲಿ ಬರೆದಿಡುವಂತಹದ್ದು. ಕಳೆದ 75 ವರ್ಷಗಳಿಂದ ಅನೇಕ ಸರ್ಕಾರಗಳು ಬಂದವು, ಮಹಿಳಾ ಮೀಸಲಾತಿ ಬಗ್ಗೆ ಚರ್ಚೆ ಮಾಡಿದ್ದರು ಆದರೆ ಜಾರಿಗೆ ತರುವ ಧೈರ್ಯ ಯಾರು ಮಾಡಲಿಲ್ಲ ಆ ನಿರ್ಣಯವನ್ನು ನಮ್ಮ ನೆಚ್ಚಿನ ಪ್ರಧಾನಿಗಳು ಮಾಡಿದ್ದಾರೆ. ಗೌರಿ ಗಣೇಶ ಹಬ್ಬದಂದು ದೇಶದ ಮಹಿಳೆಯರಿಗೆ ಅಣ್ಣನಾಗಿ ಮೀಸಲಾತಿ ಅಂಗಿಕಾರದ ಉಡುಗೊರೆಯನ್ನು ನೀಡಿದ್ದಾರೆ.
ಪ್ರತಿಯೊಂದು ಯುಗದಲ್ಲಿ, ಪ್ರತಿಯೊಂದು ಕ್ಷೇತ್ರದಲ್ಲಿ ಹೆಣ್ಣುಮಕ್ಕಳು ಯಾರಿಗೂ ಕಡಿಮೆ ಇಲ್ಲ. ಒಬ್ಬ ಆಟೋ ಚಾಲಕಿಯಿಂದ ವಿಜ್ಞಾನಿಯವರೆಗೂ ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ರಾಜಕೀಯ ರಂಗದಲ್ಲಿಮಹಿಳೆಯರಿಗೆ ಅವಕಾಶಗಳು ಕಡಿಮೆ ಇದ್ದಿದ್ದರಿಂದ ರಾಜಕೀಯಕ್ಕೆ ಬರಲು ಬಹಳ ಕಷ್ಟಪಡಬೇಕಿತ್ತು. ನಾವು ಎಷ್ಟೇ ಸಮರ್ಥ ಇದ್ದರೂ ಫೈಟ್ ಮಾಡಿ ಮುಂದೆ ಬರುವಹಾಗಿತ್ತು. ಇದನ್ನು ಅರಿತು ಪ್ರದಾನಿಗಳು ಮೀಸಲಾತಿ ಅಂಗೀಕರಿಸಿದ್ದಾರೆ. ಇದರಿಂದಾಗಿ ಬಹಳಷ್ಟು ಹೆಣ್ಣು ಮಕ್ಕಳಿಗೆ ರಾಜಕೀಯಕ್ಕೆ ಬರುವ ಅವಕಾಶ ಸಿಕ್ಕಿದೆ. ಹಾಗಾಗಿ ಇಡೀ ದೇಶದಲ್ಲಿ ಮಹಿಳೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದರು.
“ದ ಜಡ್ಜ್ ಮೆಂಟ್” ಚಿತ್ರದಲ್ಲಿ ಕ್ರೆಜಿಸ್ಟಾರ್ ರವಿಚಂದ್ರನ್: ಅದ್ದೂರಿ ಕ್ಲೈಮ್ಯಾಕ್ಸ್
Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!
Cogress: ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ