Sports News: ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್‌ಗೆ ತಮಿಳುನಾಡು ಸರ್ಕಾರ, 5 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.
ಗುಕೇಶ್‌ಗೆ ಇಂದು ತಮಿಳುನಾಡಿನಲ್ಲಿ ಸನ್ಮಾನ ಮಾಡಲಾಗಿದ್ದು, 5 ಕೋಟಿ ರೂ. ಬಹುಮಾನ ಘೋಷಣೆ ಮಾಡಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗುಕೇಶ್‌ಗೆ ಚೆಕ್ ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶ್ವ ಚಾಂಪಿಯನ್ ಆಗಿದ್ದ ಮಾಸ್ಟರ್ ವಿಶ್ವನಾಥನ್ ಆನಂದ್ ಕೂಡ ಭಾಗವಹಿಸಿದ್ದಾರೆ.
ಈ ಬಗ್ಗೆ ಸ್ವತಃ ಸ್ಟಾಲಿನ್ ಅವರೇ, ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಶ್ವದ ಅತೀ ಕಿರಿಯ ಚೆಸ್ ಚಾಂಪಿಯನ್ ಆಗಿರುವ, ಡಿ.ಗುಕೇಶ್ ಅವರ ಸಾಧನೆಯನ್ನು ಗುರುತಿಸಿ, ಅವರಿಗೆ 5 ಕೋಟಿ ರೂಪಾಯಿ ಬಹುಮಾನ ನೀಡುತ್ತಿರುವುದು ನಿಜಕ್ಕೂ ಸಂತಸದ ವಿಷಯವಾಗಿದೆ. ಅವರ ಐತಿಹಾಸಿಕ ಗೆಲುವು ರಾಷ್ಟ್ರಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷ ತಂದಿದೆ. ಅವರು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.
ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆದ ಬಳಿಕ, 11 ಕೋಟಿ ರೂಪಾಯಿ ಬಹುಮಾನ ಪಡೆದಿದ್ದಾರೆ. 18 ವರ್ಷ ವಯಸ್ಸಿನ ಗುಕೇಶ್ ವಿಶ್ವದ ಅತ್ಯಂತ ಕಿರಿಯ ಚೆಸ್ ಚಾಂಪಿಯನ್ ಎನ್ನಿಸಿಕೊಂಡಿದ್ದಾರೆ.