www.karnatakatv.net : ವಿಶ್ವ ಪರಿಸರದ ದಿನ ಅಂಗವಾಗಿ ಸಚಿವ ಡಾ. ನಾರಾಯಣಗೌಡ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಸಿ ನೆಡುವ ಮೂಲಕ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಚಿವರ ಸೂಚನೆಯಂತೆ ಎಲ್ಲಾ ತಾಲ್ಲೂಕು ಕೇಂದ್ರ ಸೇರಿದಂತೆ ರಾಜ್ಯಾದ್ಯಂತ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದೊಂದಿಗೆ, ಎನ್‌ಎಸ್‌ಎಸ್ ಸ್ವಯಂ ಸೇವಕರು, ಅಧಿಕಾರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು/ ಸಿಬ್ಬಂದಿ ವರ್ಗ ಸಸಿಗಳನ್ನು ನೆಟ್ಟರು. ರಾಜ್ಯಾದ್ಯಂತ ೨೫ ಸಾವಿರಕ್ಕೂ ಅಧಿಕ ಎನ್‌ಎಸ್‌ಎಸ್ ಸ್ವಯಂ ಸೇವಕರು ಪರಿಸರದ ರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತರಾಗಿ ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕೊರೊನಾ ಸೋಂಕಿತರಾಗಿ ಆಸ್ಪತ್ರೆ ಸೇರಿದ್ದ ಬಹಳಷ್ಟು ಜನ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಅವರೆಲ್ಲರು ತಮ್ಮ ಮನೆ ಸುತ್ತವೇ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಸಚಿವರು ಮನವಿ ಮಾಡಿದ್ದರು. ಸಚಿವರ ಕರೆಗೆ ಓಗುಟ್ಟು ಸಾಕಷ್ಟು ಜನರು ಸಸಿ ನೆಡುವ ಮೂಲಕ ಪರಿಸರ ದಿನದಲ್ಲಿ ಪಾಲ್ಗೊಂಡರು. ಆ ಮೂಲಕ ಸಚಿವರು, ಕೊರೋನಾ ಗೆದ್ದವರನ್ನೂ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದು ವಿಶೇಷವಾಗಿತ್ತು.