Teck News:
ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್ ಬೆಲೆ 20,000 ರೂ. ಒಳಗೆ ಇರಬಹುದೆಂದು ಅಂದಾಜಿಸಲಾಗಿದೆ.
ರೆಡ್ಮಿ ನೋಟ್ 11SE ಸ್ಮಾರ್ಟ್‌ಫೋನ್ ಭಾರತದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಲಿದೆಯಂತೆ. ಇದು 6GB RAM + 64GB, 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಗಳಿಂದ ಕೂಡಿದೆ. ಬಿಫ್ರಾಸ್ಟ್ ಬ್ಲೂ, ಕಾಸ್ಮಿಕ್ ವೈಟ್, ಶ್ಯಾಡೋ ಬ್ಲ್ಯಾಕ್ ಮತ್ತು ಥಂಡರ್ ಪರ್ಪಲ್ ಬಣ್ಣಗಗಳ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ.
ಸ್ಮಾರ್ಟ್ಫೋನ್ನ ವಿಶೇಷತೆ ಬಗ್ಗೆ ಹೇಳುವುದಾದರೆ , ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ. ಇದು 1,100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದ್ದು, ಸಿನಿಮಾ ವೀಕ್ಷಣೆ ಮಾಡುವಾಗ, ಗೇಮ್ ಆಡುವಾಗ ವಿಶೇಷ ಅನುಭವ ನೀಡುತ್ತದೆ. ಮೀಡಿಯಾಟೆಕ್ ಹಿಲಿಯೋ G95 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಮಾಲಿ-G76 GPU ಸಪೋರ್ಟ್ ಅನ್ನು ಕೂಡ ಪಡೆದುಕೊಂಡಿದೆ ಎನ್ನಲಾಗಿದೆ.
ಹೊಸ ರೂಪದ Noise ಬ್ರಾಂಡ್ ಡಿಜಿಟಲ್ ಸ್ಮಾರ್ಟ್‌ವಾಚ್ ಬಿಡುಗಡೆ..! ಇದರಲ್ಲಿದೆ ಸೂಪರ್ ಫೀಚರ್ಸ್..!
ತಿಂಗಳ ಅಂತ್ಯದ ವೇಳೆಗೆ ಬೆಂಗಳೂರಲ್ಲೂ ಸಿಗಲಿದೆಯಾ ಮೊದಲ ಹಂತದ 5ಜಿ ಸೇವೆ..?!
ಹಾವೇರಿ: ಆ.24ರಂದು ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ