Wednesday, April 16, 2025

Latest Posts

ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ

- Advertisement -

political story:

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ ಪ್ರಕ್ಷುಬ್ಧಗೊಳಿಸುವಂತಹ ಕೆಲಸ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಈ ಕೃತ್ಯ ಕ್ಷಮೆಗೆ ಅರ್ಹವಲ್ಲ. ಕಾಂಗ್ರೆಸ್ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ಸುರ್ಜೆವಾಲ ಹೇಳಬೇಕು ಎಂದು ಹೇಳಿದರು. ಘಟನೆ ಕುರಿತು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ಮುತ್ಸದ್ಧಿ, ಹಿರಿಯ ರಾಜಕಾರಣಿ. ಅವರ ಮನೆ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಯಾರೂ ಸಹ ಈ ರೀತಿ ಮಾಡಬಾರದು. ಇದು ರಾಜಕೀಯ ಪ್ರೇರಿತವೂ ಆಗಿರಬಹುದು. ಚೆಕ್ ಮಾಡಿ ನೋಡುತ್ತೇವೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದರು.

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ..

ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ, 2 ಸಾವು, 12 ಜನರಿಗೆ ಗಾಯ..

- Advertisement -

Latest Posts

Don't Miss