ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ಯಲಹಂಕ ಆಸ್ಪತ್ರೆ ಸೀಲ್‌ಡೌನ್..!

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತ ಹೋಗುತ್ತಿದೆ. ಅದರಲ್ಲೂ ಇಡೀ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿದ್ರೆ, ಬರೀ ಬೆಂಗಳೂರಿನಲ್ಲೇ ಒಂದು ದಿನಕ್ಕೆ 800ಕ್ಕೂ ಹೆಚ್ಚು ಜನ ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ.

ಇನ್ನು ಯಲಹಂಕದಲ್ಲೂ ಕೂಡ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 2 ದಿನಗಳ ಕಾಲ ಯಲಹಂಕ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್ ಮಾಡಲಾಗಿದೆ. ಈ ಆಸ್ಪತ್ರೆಯ ಕೆಲ ಸಿಬ್ಬಂದಿಗಳಿಗೆ ಸೋಂಕು ಧೃಡವಾಗಿದ್ದು, ಸೋಂಕು ಹರಡದಂತೆ ಬಿಬಿಎಂಪಿಯಿಂದ ಆಸ್ಪತ್ರೆ ಸುತ್ತಮುತ್ತ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ.

ಸೋಮವಾರದ ತನಕ ಈ ಕರ್ಫ್ಯೂ ಜಾರಿಯಲ್ಲಿರಲಿದ್ದು, ಭಾನುವಾರ ಕರ್ಫ್ಯೂ ಹಿನ್ನೆಲೆ ಒಟ್ಟು ಮೂರು ದಿನಗಳ ಕಾಲ ಆಸ್ಪತ್ರೆ ಬಂದ್ ಆಗಲಿದೆ. ಈ ಕಾರಣಕ್ಕೆ ಸೋಮವಾರ ಬರುವಂತೆ ರೋಗಿಗಳ ಬಳಿ ಆಸ್ಪತ್ರೆ ಸಿಬ್ಬಂದಿ ಮನವಿ ಮಾಡಿದ್ದಾರೆ.

ಕರ್ನಾಟಕ, ಮಹಾರಾಷ್ಟ್ರ, ದೇಹಲಿ, ತಮಿಳುನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊವಿಡ್ -19 ಸೋಂಕಿತರು ಇದ್ದಾರೆ. ಲಾಕ್‌ಡೌನ್ ನಿಯಮ, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು , ಮಾಸ್ಕ್ ಧರಿಸದಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author