ʼಟಾಕ್ಸಿಕ್‌ʼ ಗೆ ಮತ್ತೆ ಬ್ರೇಕ್‌! ಸಿನೆಮಾಕಾನ್‌ನಲ್ಲಿ ಭರ್ಜರಿ ಪ್ರತಿಕ್ರಿಯೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರಕ್ಕೆ ಮತ್ತೆ ಬ್ರೇಕ್‌ ಬಿದ್ದಿದೆ. ‘ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಮುಂದಿನ ಚಿತ್ರ ‘ಟಾಕ್ಸಿಕ್’ ಮೇಲೆ ಅಭಿಮಾನಿಗಳ ನಿರೀಕ್ಷೆ ಬಹು ದೊಡ್ಡಮಟ್ಟದಲ್ಲಿ ಬೆಳೆದು ನಿಂತಿದೆ. ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರಕ್ಕೆ ಸದ್ಯಕೆ ಬ್ರೇಕ್‌ ಬಿದ್ದಿದೆ.

ಇತ್ತೀಚೆಗೆ ಅಮೆರಿಕದ ಲಾಸ್ ವೇಗಸ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ‘ಸಿನೆಮಾಕಾನ್’ ಈವೆಂಟ್‌ನಲ್ಲಿ ‘ಟಾಕ್ಸಿಕ್’ ಚಿತ್ರದ ಪ್ರೆಸೆಂಟೇಶನ್‌ಗೆ ಜಾಗತಿಕ ವಿತರಕರು ಹಾಗೂ ಚಿತ್ರೋದ್ಯಮದ ಪ್ರಮುಖರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಜಾಗತಿಕ ಮಾರುಕಟ್ಟೆಯ ಬೇಡಿಕೆ ಹಾಗೂ ಚಿತ್ರದ ವಿಸ್ತಾರವನ್ನು ಗಮನದಲ್ಲಿಟ್ಟುಕೊಂಡು, ʼಟಾಕ್ಸಿಕ್‌ʼ ಚಿತ್ರವನ್ನು ವಿಶ್ವದಾದ್ಯಂತ ಏಕಕಾಲಕ್ಕೆ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ, ಎಂದು ಯಶ್ ಅಧಿಕೃತವಾಗಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಯಶ್, “ನಾವು ಹಲವಾರು ಸಿನಿಮಾಗಳನ್ನು ಮಾಡುತ್ತೇವೆ, ಕೆಲವು ಸಿನಿಮಾಗಳು ಮಾತ್ರ ನಾವು ಚಿತ್ರರಂಗವನ್ನು ಏಕೆ ಇಷ್ಟಪಟ್ಟೆವು ಎಂಬುದನ್ನು ನೆನಪಿಸುತ್ತವೆ. ಟಾಕ್ಸಿಕ್ ಅಂತಹ ಒಂದು ಪಯಣ” ಎಂ ಎಂದು ಹೇಳಿದ್ದಾರೆ.

ಭಾರತೀಯ ಚಿತ್ರರಂಗ ಜಾಗತಿಕ ಮಟ್ಟದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತಿರುವ ಈ ಸಮಯದಲ್ಲಿ, ‘ಟಾಕ್ಸಿಕ್’ ಚಿತ್ರವೂ ಆ ಪ್ರಯಾಣದ ಭಾಗವಾಗಲಿದೆ ಎಂದು ಯಶ್ ಹೇಳಿದ್ದಾರೆ. ಅಭಿಮಾನಿಗಳ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಯಶ್, ತಾಳ್ಮೆಯಿಂದ ಕಾಯುವಂತೆ ಮನವಿ ಮಾಡಿದ್ದಾರೆ.

ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ. ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವು ಜಾಗತಿಕ ಮಟ್ಟದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ.

About The Author