Tuesday, October 14, 2025

Latest Posts

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

- Advertisement -

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆ ಕಾಣಿಸಲಿದೆ. ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಬಹುದು. ಗುಡುಗು ಮತ್ತು ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ. ಶೇಕಡಾ 86 ರಿಂದ 100 ರಷ್ಟು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ. ಗಾಳಿಯ ವೇಗ 13–15 ಕಿ.ಮೀ. ಪ್ರತಿಗಂಟೆ ಇರಲಿದೆ. ಅಕ್ಟೊಬರ್ 15 & 16 ರಂದು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಹಾಗಾದ್ರೆ ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ? ಇದೆ ಅನ್ನೋದನ್ನ ನೋಡೋದಾದ್ರೆ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಕೊಡಗು, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಅಥವಾ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ.

ಒಣ ಹವೆ ಇರುವ ಜಿಲ್ಲೆಗಳು – ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣ ಕಾಣಿಸಬಹುದು. ಹವಾಮಾನ ಇಲಾಖೆ ಸಾರ್ವಜನಿಕರನ್ನು ಎಚ್ಚರಿಸುತ್ತಿದ್ದು, ಈ ಸಂದರ್ಭದಲ್ಲಿ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಮನವಿ ಮಾಡಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss