Thursday, October 2, 2025

Latest Posts

ಭೀಮಾ ನದಿ ನೀರಿಗಾಗಿ ಪ್ರಶ್ನೆ ಮಾಡ್ತೀನಿ, ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕಿಡಿ!

- Advertisement -

ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್‌ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ ಬಿದ್ದರೆ ನ್ಯಾಯಾಲಯದ ಬಾಗಿಲು ತಟ್ಟುವುದಾಗಿಯೂ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಭೀಮಾ ನದಿ ಪ್ರವಾಹದಿಂದ ಉಂಟಾದ ಹಾನಿಯ ವೈಮಾನಿಕ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆಯ ನಂತರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಮ್ಮ ಪಾಲಿನ ಭೀಮಾ ನದಿಯ ನೀರನ್ನು ಪಡೆಯೋದು ಶತಃಸಿದ್ಧ. ಬಚಾವತ್ ತೀರ್ಪಿನಂತೆ ನದಿ ನೀರು ಹಂಚಿಕೆಯ ವಿಚಾರದಲ್ಲಿ ನಾವು ಪ್ರತಿಬಾದಿಸುವುದಿಲ್ಲ ಆದರೆ ನ್ಯಾಯವನ್ನು ಕಾಪಾಡುವ ಹಕ್ಕು ನಮ್ಮದು. ಅದಕ್ಕೆ ನಾವು ಶಾಸನ ಬದ್ಧ ವೇದಿಕೆಯಲ್ಲಿ ಪ್ರಶ್ನೆ ಮಾಡಲೂ ಸಿದ್ಧ ಎಂದು ಘಂಟಾಘೋಷವಾಗಿ ಹೇಳಿದ್ದಾರೆ.

ಈ ನಡುವೆ ಉದ್ದಿಮೆ ಸಚಿವ ಎಂ.ಬಿ.ಪಾಟೀಲ್ ಕೂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಮಹಾರಾಷ್ಟ್ರವು ಕೃಷ್ಣಾ ನದಿಯ ಕೊಳ್ಳದಲ್ಲಿ ಒಟ್ಟು 300 ಟಿಎಂಸಿ ನೀರನ್ನು ಬಳಸುವ ಹಕ್ಕು ಹೊಂದಿದೆ. ಅದರಲ್ಲಿ 95 ಟಿಎಂಸಿ ನೀರು ಭೀಮಾ ನದಿಯಿಂದ ಕೊಡಲಾಗಿದೆ. ಆದರೆ ಮಹಾರಾಷ್ಟ್ರ ಹೆಚ್ಚು ನೀರನ್ನು ಹಿಡಿದಿಟ್ಟುಕೊಂಡು ಬಳಕೆ ಮಾಡುತ್ತಿದೆ ಎಂಬ ಆರೋಪಗಳಿವೆ. ಭೀಮಾ ನದಿಯ ಹಿನ್ನೀರನ್ನು ಸೀನಾ ನದಿಗೆ ತಿರುಗಿಸಿ ಬಳಸುತ್ತಿರುವುದರ ಕುರಿತು ಕೆಲವು ವಾದವಿವಾದಗಳು ನಡೆದಿದ್ದವು ಎಂದರು.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಹ ಈ ಮಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಭೀಮಾ ನದಿಯಲ್ಲಿ ಕರ್ನಾಟಕದ ಪಾಲಿನ ನೀರನ್ನು ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ಬೇಕಾದರೆ CWC ಮೊರೆ ಹೋಗುವ ಮೂಲಕ ನ್ಯಾಯ ಸಾಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಈ ಪ್ರಕರಣವು ಕೇಂದ್ರ ಜಲ ಆಯೋಗ ಹಾಗೂ ನ್ಯಾಯಾಂಗದ ಮೂಲಕ ಮುಂದುವರಿಯಬೇಕೆಂಬ ನಿರೀಕ್ಷೆಯಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss