ಕೊಪ್ಪಳ ಜಿಲ್ಲೆಯ ಗಿಣಿಗೇರ ಮೂಲದ ಯುವ ಕೃಷಿಕ ಹನುಮಂತಪ್ಪ ಕೊಲ್ಕರನಿಗೆ ಕರ್ನಾಟಕ ವಿಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶದ ರೈತ ಕುಟುಂಬದಲ್ಲಿ ಜನಿಸಿ ಹನುಮಂತಪ್ಪ ಕೋಲ್ಕಾರ್ ಕೃಷಿಯನ್ನೇ ಬದುಕಾಗಿಸಿಕೊಂಡು ಕನ್ನಡ ಮತ್ತು ರೈತ ಪರ ಹೋರಾಟಗಾರನಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಸಿಂದೋಗಿ ಗ್ರಾಮದಲ್ಲಿ ಆಧುನಿಕ ಬಗೆಯ ವಾಣಿಜ್ಯ ಬೆಳೆಗಳನ್ನ ಬೆಳೆದು ಕೊಪ್ಪಳ ಜಿಲ್ಲೆಯ ಯುವಕರಿಗೆ ಮತ್ತು ರೈತರಿಗೆ ಮಾದರಿಯಾಗಿದ್ದಾರೆ.
‘ಮಣ್ಣನ್ನು ನಂಬಿ ಕೆಟ್ಟವರಿಲ್ಲ’ ಎಂಬಂತೆ ಸಂಪೂರ್ಣ ಸಾವಯವ ಕೃಷಿ ಮೂಲಕ ಬರಡು ಭೂಮಿಯಲ್ಲಿ ಬಂಗಾರ ಬೆಳೆಯುವಂತೆ ವಾಣಿಜ್ಯ ಬೆಳೆಯನ್ನ ಬೆಳೆದ ಪ್ರಗತಿಪರ ಯುವ ರೈತ ಹನುಮಂತಪ್ಪ ಕೋಲ್ಕಾರ್, ಸಾವಯವ ಕೃಷಿಯಲ್ಲಿ ಮಾಡಿರುವ ಸೇವೆ ಮತ್ತು ಸಾಧನೆ ಪರಿಗಣಿಸಿ ಅಖಿಲ ಭಾರತ ಕನ್ನಡ ಕವಿಗಳ ಪರಿಷತ್ತು ರವೀಂದ್ರ ಕಲಾಕ್ಷೇತ್ರ ಬೆಂಗಳೂರುನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಅಖಿಲ ಭಾರತ ಕನ್ನಡ ಕವಿಗಳು ಪ್ರಥಮ ಸಮ್ಮೇಳನದಲ್ಲಿ ಹಿರಿಯ ಸಾಹಿತಿ ಮತ್ತು ಐಎಎಸ್ ಅಧಿಕಾರಿ ಡಾ. ಸೋಮಶೇಖರ್, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸಂತೋಷ ಹೆಗ್ಡೆ, ನಿರ್ದೇಶಕ ಶಂಕರ್ ಬಟ್, ಚಿತ್ರನಟ ಗಣೇಶ್, ಕೆಸರ್ಕರ್ ಸ್ವಾಮೀಜಿಗಳು ಮತ್ತು ಗಣ್ಯತಿಗಣ್ಯರು ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ವರದಿ : ಲಾವಣ್ಯ ಅನಿಗೋಳ