ನಿಮ್ಮ ನಿಜಾಮಗಿರಿ ಇಲ್ಲಿ ನಡೆಯಲ್ಲ: ಸುರೇಶ್ ದೇಶ ವಿಭಜನೆ ಹೇಳಿಕೆಗೆ ಸಿ.ಟಿ.ರವಿ ಟಾಂಗ್

Hassan News: ಹಾಸನ: ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್‌ಗೆ ಒಟ್ಟಗೂಡಿಸಿ ಅಭ್ಯಾಸನೇ ಇಲ್ಲ. ರಾಹುಲ್‌ಗಾಂಧಿ ಅವರು ಭಾರತ್ ತೋಡೊ ಯಾತ್ರೆ ಅಂತ ಇಟ್ಟಿದ್ದರೆ ಡಿ.ಕೆ.ಸುರೇಶ್ ಅವರ ಹೇಳಿಕೆಗಳಿಗೆ ತಾತ್ವಿಕವಾದ ಬಲ ಬರುತ್ತಿತ್ತು. ಜೋಡೊ ಅಂತ ಹೇಳ್ತಾರೆ ಇವರು ಒಡೆಯುವ ಮಾತು ಆಡುತ್ತಾರೆ. ರಾಷ್ಟ್ರ ಒಡೆಯುವ ಮಾತನ್ನು ಡಿ.ಕೆ.ಸುರೇಶ್ ಹೇಳಿದರೆ. ಜಾತಿ ಜಾತಿ ನಡುವೆ ಒಡೆಯುವ ರಾಜಕಾರಣವನ್ನು ಸಿದ್ದರಾಮಯ್ಯರಾದಿಯಾಗಿ ಮಾಡಿಕೊಂಡು ಬಂದಿದ್ದಾರೆ. ಸಿದ್ದರಾಮಯ್ಯ ಅವರು ಅಪರೂಪಕ್ಕೊಮ್ಮೆ ಮನುಷ್ಯತ್ವ ಇರಬೇಕು ಅಂತಾರೆ ಮಾಡೋದೆಲ್ಲಾ ಜಾತಿ ರಾಜಕಾರಣ ಎಂದು ಕಾಂಗ್ರೆಸ್ ವಿರುದ್ಧ ರವಿ ಕಿಡಿಕಾರಿದ್ದಾರೆ.

ಬಡುವರು ಎಲ್ಲಾ ಜಾತಿಯಲ್ಲೂ ಇದ್ದಾರೆ ಯಾಕೆ ಅವರು ಬಡವರ ಪರ ಯೋಚನೆ ಮಾಡಲ್ಲ. ಬಡವರ ಪರವಾಗಿ ಏಕೆ ಮಾತನಾಡಲ್ಲ. ಜಾತಿಯನ್ನೆ ಇಟ್ಕಂಡು ಏಕೆ ಮಾತಾನಾಡುತ್ತಾರೆ. ಎಲ್ಲಾ ಜಾತಿಯಲ್ಲೂ ಒಳ್ಳೆವರು ಇದ್ದಾರೆ ಕೆಟ್ಟವರು ಇದ್ದಾರೆ. ಹಾಗಾದರೆ ಜಾತಿ ದ್ವೇಷ ಯಾಕೆ ಇವರಿಗೆ. ಜಾತಿ ದ್ವೇಷ, ಜಾತಿ ಒಡೆದು ರಾಜಕಾರಣ ಮಾಡೋದು, ಭಾಷೆ ಹೆಸರಿನಲ್ಲಿ ರಾಜಕಾರಣ ಮಾಡೋದು. ಅದು ಕಾಂಗ್ರೆಸ್ ಕಲ್ಚರ್, ಆ ಕಾಂಗ್ರೆಸ್ ಸಂಸ್ಕೃತಿಯನ್ನೇ ಡಿ.ಕೆ.ಸುರೇಶ್ ಹೇಳಿದ್ದಾರೆ. ಸಂಕುಚಿತ ಮನೋಭಾವ ಇರುವವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ.

ದೇಶ ಒಡೆತಿವಿ ಅಂತ ಹೊರಟ ಜಿನ್ನಾಗೆ ಇವರು ಬೆಂಬಲ ಕೊಟ್ಟರು. ಅದಾದನಂತರ ಸರ್ದಾರ್ ಪಟೇಲ್ ದೇಶವನ್ನು ಒಗ್ಗೂಡಿಸಿದರು. ರಜಾಕಾರರು, ಹೈದರಾಬಾದ್ ನಿಜಾಮನ ಮನಸ್ಥಿತಿಯನ್ನು ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ವರ್ತಿಸಬಾರದು. ಆಕಸ್ಮಾತ್ ವರ್ತಿಸಿದರೆ ನೀವು ನಿಜಾಮ ಅಲ್ಲ. ನಿಜಾಮನನ್ನೇ ಬಗ್ಗು ಬಡೆದಂತಹ ಸರ್ದಾರ್ ವಲ್ಲಭಾಯಿ ಪಟೇಲ್ ತರಹದ ನೇತೃತ್ವ ಬಾಜಪಾ ಕೈಯಲ್ಲಿ ಇದೆ. ನಿಮ್ಮ ನಿಜಾಮಗಿರಿ ಇಲ್ಲಿ ನಡೆಯಲ್ಲ ಎಂದು ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ.

ಫೆ.7 ರಂದು ದೆಹಲಿಯಲ್ಲಿ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಅವರು ಪ್ರತಿಭಟನೆ ಮಾಡಲಿ, ಪ್ರತಿಭಟನೆ ಮಾಡಲು ಎಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಅಂಕಿ ಅಂಶಗಳನ್ನು ಮುಂದಿಟ್ಟು ಜನರಿಗೆ ಮನವರಿಕೆ ಮಾಡ್ತೀವಿ. ಅವರು ಹೇಳುವುದರಲ್ಲಿ ಎಷ್ಟು ಸತ್ಯ ಇದೆ, ಸುಳ್ಳು ಇದೆ ಅನ್ನೋದನ್ನ ಜನರ ಮುಂದೆ ಇಡ್ತಿವಿ. ಪ್ರತಿಭಟನೆ ಮಾಡಲು ಹಕ್ಕಿದೆ ದೇಶ ಒಡೆಯಲು ಹಕ್ಕಿಲ್ಲ. ಪ್ರತಿಭಟನೆ ಮಾಡಬಹುದು, ದೇಶ ಒಡೆಯಲು ಅಧಿಕಾರವಿಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.

ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್

ನಾನು ಬದುಕಿದ್ದೇನೆ ಎಂದು ಶಾಕ್ ನೀಡಿದ ನಟಿ ಪೂನಂ ಪಾಂಡೆ: ವೀಡಿಯೋ ವೈರಲ್

About The Author